ಹುಬ್ಬಳ್ಳಿ; ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಲ್ಲಿಯೇ ಇದ್ರು ಕೂಡ ಕಾಂಗ್ರೆಸ್ ಪಕ್ಷದ ನಾಯಕರ ಜೊತೆಗೆ ಹೆಚ್ಚು ಗುರುತಿಸಿಕೊಳ್ಳುತ್ತಾರೆ. ಈ ಬೆಳವಣಿಗೆ ಬಿಜೆಪಿಗೂ ಮುಜುಗರ ತರಿಸಿದೆ. ಈ ಸಂಬಂಧ ಇದೀಗ ಬಿಜೆಪಿಯ ಶಿಸ್ತು ಸಮಿತಿಯ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ವಾರ್ ಅವರನ್ನು ಪಕ್ಷದಿಂದಾನೇ ಉಚ್ಚಾಟನೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಲಿಂಗರಾಜ್ ಪಾಟೀಲ್ ಅವರು,ಬಪಕ್ಷ ವಿರೋಧಿ ಚಟುವಟಿಕೆಯ ಆರೋಪ ಹೊತ್ತ ಇಬ್ಬರು ಶಾಸಕರನ್ನು ಈ ತಿಂಗಳಾಂತ್ಯಕ್ಕೆ ಪಕ್ಷದಿಂದ ಉಚ್ಚಾಟನೆ ಮಾಡಲಾಗುವುದು. ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ವಾತ್ ನಿರಂತರವಾಗಿ ಪಕ್ಷ ದ್ರೋಹ ಮಾಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ.

ಈ ಇಬ್ಬರ ಬಗ್ಗೆ ಈಗಾಗಲೇ ಕೇಂದ್ರ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಟೀಲ್ ಅವರಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರ ಕ್ಷೇತ್ರಗಳಿಗೆ ತೆರಳಿಯೇ ವರದಿಯನ್ನು ಸಿದ್ದಪಡಿಸಿದ್ದೇನೆ. ಅಲ್ಲಿನ ಮಂಡಳ ಅಧ್ಯಕ್ಷರು ಮತ್ತು ಜಿಲ್ಲಾಧ್ಯಕ್ಷರಿಂದ ವರದಿ ಸಿದ್ಧಪಡಿಸಿ ನೀಡಿದ್ದೇನೆ. ಅಲ್ಲದೆ ಇಬ್ಬರು ಶಾಸಕರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗೊಯಾದ ವಿಡಿಯೋ ಮತ್ತು ಪೇಪರ್ ಕಟಿಂಗ್ ಗಳನ್ನ ವರದಿಯ ಜೊತೆಗೆ ಸಲ್ಲಿಸಲಾಗಿದೆ. ಇಲ್ಲಿಯವರೆಗೂ ಎರಡ್ಮೂರು ಬಾರಿ ಕೇಂದ್ರಕ್ಕೆ ವರದಿ ನೀಡಲಾಗಿದೆ. ಈ ತಿಂಗಳಾಂತ್ಯಕ್ಕೆ ಇಬ್ಬರು ಶಾಸಕರ ಉಚ್ಛಾಟನೆ ಆಗುತ್ತದೆ ಎಂದಿದ್ದಾರೆ.
ಈ ಬಗ್ಗೆ ಬಿವೈ ವಿಜಯೇಂದ್ರ ಅವರು ಕೂಡ ಮಾತನಾಡಿದ್ದರು. ಸೋಮಶೇಖರ್ ಅವರ್ಯಾಕೆ ಸರ್ಕಾರದ ಪರವಾಗಿ ಹೇಳಿಕೆ ನೀಡುತ್ತಿದ್ದಾರೆಂಬುದು ಗೊತ್ತಿಲ್ಲ. ಆದರೆ ನಾವೂ ಕೂಡ ಪಕ್ಷದ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದರು.

