ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಈ ಬಾರಿ ಬಿಜೆಪಿಯಲ್ಲಿ ಬಂಡಾಯದ ಬಿಸಿ ಸ್ವಲ್ಪ ಜೋರಾಗಿಯೇ ಹೊತ್ತಿಕೊಂಡಿದೆ. ಟಿಕೆಟ್ ಸಿಗಲ್ಲ ಅಂತ ಗೊತ್ತಾಗಿದ್ದೆ ತಡ ಎಲ್ಲರೂ ನಾ ಮುಂದು ತಾ ಮುಂದು ಅಂತ ರಾಜೀನಾಮೆ ಪತ್ರ ಹಿಡಿದು ನಿಂತಿದ್ದಾರೆ. ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದಾರೆ. ಇದೀಗ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಂಡಾಯವೆದ್ದು ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ.
ಬಿಜೆಪಿಯಲ್ಲಿ ಮಂತ್ರಿ ಸ್ಥಾನ ಕೊಟ್ಟು ಕಿತ್ತುಕೊಂಡಾಗಲೂ ಸುಮ್ಮನೆ ಇದ್ದರು, ಆದರೆ ಟಿಕೆಟ್ ವಿಚಾರದಲ್ಲಿ ಎರಡನೇ ಪಟ್ಟಿ ರಿಲೀಸ್ ಆದಾಗ ಸವದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಮೂಲಗಳ ಪ್ರಕಾರ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸೇರುವುದಕ್ಕೂ ಮುನ್ನ ಎರಡು ಡಿಮ್ಯಾಂಡ್ ಇಟ್ಟಿದ್ದಾರಂತೆ.
ಕಾಂಗ್ರೆಸ್ ಆಗಲಿ, ಬಿಜೆಪಿಯಾಗಲೀ ಗೆಲ್ಲುವ ಕುದುರೆಯನ್ನು ನೋಡುತ್ತಾರೆ. ಹಣ ಬಲ, ಜನ ಬಲ ಇದ್ದರೆ ಆ ಅಭ್ಯರ್ಥಿ ಯಾವ ಪಕ್ಷದಿಂದಾದರೂ ಸರಿ ಅವರ ಪಕ್ಷಕ್ಕೆ ಬಂದರೆ ಕರೆದುಕೊಳ್ಳುತ್ತಾರೆ. ಇದೀಗ ಲಕ್ಷ್ಮಣ ಸವದಿ, ತನ್ನ ಮಗನಿಗೆ ಅಥಣಿಯಲ್ಲಿ ಟಿಕೆಟ್ ನೀಡಬೇಕು ಹಾಗೇ ಆ ಕ್ಷೇತ್ರದಲ್ಲಿ ಯಾರೂ ಬಂಡಾಯವೇಳಬಾರದು ಎಂದು ಕಂಡೀಷನ್ ಹಾಕಿದ್ದಾರೆ. ಈಗ ಕಾಂಗ್ರೆಸ್ ಈ ಕಂಡೀಷನ್ ಗೆ ಒಕೆ ಎಂದರೆ ಸವದಿ, ಮಗನ ಸಮೇತ ಕಾಂಗ್ರೆಸ್ ಕೈಹಿಡಿಯಲಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್