2019ರಲ್ಲಿ ಯಾವ ಪಕ್ಷಕ್ಕೂ ಬಹುಮತ ಬರದೆ ಇದ್ದ ಕಾರಣ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಿಕೊಂಡಿತ್ತು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ನ ಹದಿನೇಳು ಶಾಸಕರು ಬಿಜೆಪಿಯ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದ್ದರು. ಆಗ ಸಮ್ಮಿಶ್ರ ಸರ್ಕಾರ ಉರುಳಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಆ ಟೀಂನವರನ್ನೆಲ್ಲಾ ಬಾಂಬೆ ಬಾಯ್ಸ್ ಅಂತಾನೆ ಕರೆಯುತ್ತಿದ್ರು. ಇದೀಗ ಆ ಟೀಂನಲ್ಲಿ ಮೂವರು ಈಗ ಮತ್ತೆ ಕಾಂಗ್ರೆಸ್ ಗೆ ವಾಪಾಸ್ ಆಗುತ್ತಿದ್ದಾರೆ.
ಈಗಾಗಲೇ ಹೆಚ್ ವಿಶ್ವನಾಥ್ ನೇರವಾಗಿ ಬಿಜೆಪಿ ಮೇಲೆ ಕಿಡಿಕಾರಿದ್ದಾರೆ. ಸಮ್ಮಿಶ್ರ ಸರ್ಕಾರದಿಂದ ದೂರವಾದ ಮೇಲೆ ಹೆಚ್ ವಿಶ್ವನಾಥ್ ಅವರಿಗೆ ಬಿಜೆಪಿಯಲ್ಲಿ ಹೇಳಿಕೊಳ್ಳುವಂತ ಸ್ಥಾನಮಾನ ಸಿಗಲಿಲ್ಲ. ಅದರಲ್ಲೂ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿತ್ತು, ವಿಶ್ವನಾಥ್ ಅವರನ್ನು ಹೊರತುಪಡಿಸಿ. ಹೀಗಾಗಿ ಕಾಂಗ್ರೆಸ್ ಜೊತೆ ಸೇರುವ ಆಸೆ ವ್ಯಕ್ತಪಡಿಸುತ್ತಿದ್ದಾರೆ. ನನಗೆ ಸಿದ್ದರಾಮಯ್ಯ ಜೊತೆಗೆ ಈಗಲೂ ಸ್ನೇಹವಿದೆ ಎಂದಿದ್ದಾರೆ. ಕಾಂಗ್ರೆಸ್ ಸೇರುವುದಕ್ಕೆ ಸಿದ್ದವಿದ್ದೇನೆ ಎಂಬ ಮಾತುಗಳನ್ನು ಆಡಿದ್ದಾರೆ.
ಜೆಡಿಎಸ್ ಪಕ್ಷದಲ್ಲಿದ್ದ ನಾರಾಯಣ ಗೌಡ ಅವರು ಆಪರೇಷನ್ ಕಮಲದ ಮೂಲಕ ಬಿಜೆಪಿ ಸೇರಿದ್ದರು. ಬಿಜೆಪಿ ಟಿಕೆಟ್ ಪಡೆದು ಗೆದ್ದಿದ್ದರು. ಈಗ ಕ್ಷೇತ್ರದಲ್ಲಿ ಬಿಜೆಪಿಯ ಬಗ್ಗೆ ಅಷ್ಟೊಂದು ಬಿಜೆಪಿಯ ನೆಲೆ ಗಟ್ಟಿಯಿಲ್ಲ. ಹೀಗಾಗಿ ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಗುಸಗುಸು ಹರಿದಾಡುತ್ತಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಶಾಸಕರು ಮತ್ತು ಸಚಿವರು ಆಗಿರುವ ಶಿವರಾಮ್ ಹೆಬ್ಬಾರ್ ಕೂಡ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ಹೆಬ್ಬಾರ್ ಅವರು ಈ ವಿಚಾರವನ್ನು ತೆಗೆದು ಹಾಕಿದ್ದಾರೆ.