Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುದ್ದಹನುಮೇಗೌಡರ ಎದುರು ಸ್ಪರ್ಧಿಸ್ತಾರಾ ವಿ ಸೋಮಣ್ಣ : ತುಮಕೂರು ಅಭ್ಯರ್ಥಿಗಳು ಇವರೇನಾ..?

---Advertisement---

ತುಮಕೂರು: ಲೋಕಸಭಟ ಚುನಟವಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ದಿನಾಂಕ ಅನೌನ್ಸ್ ಆಗುವುದೊಂದೆ ಬಾಕಿ. ಅದಕ್ಕಾಗಿಯೇ ಟಿಕೆಟ್ ಆಕಾಂಕ್ಷಿಗಳು ಅದಾಗಲೇ ಜನರ ಬಳಿಗೆ ಓಡಾಟ ನಡೆಸುತ್ತಿದ್ದಾರೆ. ಸಮಸ್ಯೆಗಳನ್ನು ಕೇಳುತ್ತಿದ್ದಾರೆ. ಇನ್ನು ಯಾವ ಪಕ್ಷದಲ್ಲೂ ಅಭ್ಯರ್ಥಿಗಳ ಫೈನಲ್ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಇದರ ಮಧ್ಯೆ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಸಚಿವ ಕೆ ಎನ್ ರಾಜಣ್ಣ ಅವರು ತಿಳಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಮಾತನಾಡಿದ ಕೆ ಎನ್ ರಾಜಣ್ಣ, ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಭಾಗದಲ್ಲಿ ಕಾಂಗ್ರೆಸ್ ನ ಎಸ್ ಪಿ ಮುದ್ದಹನುಮೇಗೌಡ ಅವರು ಬಿಜೆಪಿಯ ವಿ ಸೋಮಣ್ಣ ಅವರೊಂದಿಗೆ ಕಣಕ್ಕೆ ಇಳಿಯಲಿದ್ದಾರೆ. ವಿ ಸೋಮಣ್ಣ ಅವರಿಗೆ ಬಿಜೆಪಿ ತುಮಕೂರು ಟಿಕೆಟ್ ನೀಡಲಿದೆ ಎಂಬ ಮಾಹಿತಿ ನನಗೆ ಇದೆ. ಕಾಂಗ್ರೆಸ್ ಮುದ್ದಹನುಮೇಗೌಡರನ್ನು ಕಣಕ್ಕೆ ಇಳಿಸಲಿದೆ‌ ಎಂದಿದ್ದಾರೆ.

 

ಇದೇ ವೇಳೆ ದಲಿತ ಸಿಎಂ ಬಗ್ಗೆಯೂ ಮಾತನಾಡಿ, ಎಚ್ ಸಿ ಮಹದೇವಪ್ಪ ಅವರು ದಲಿತ ಸಿಎಂ ಬೇಕು ಎಂಬ ಬೇಡಿಕೆ ಮುಂದಿಡುವುದರಲ್ಲಿ ಯಾವುದೇ ತಪ್ಪಿಲ್ಲ. ಮುಖ್ಯಮಂತ್ರಿ ಬದಲಾವಣೆಯಾದರೆ ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಮಾಡಲಿ. ದಲಿತರನ್ನು ಸಿಎಂ ಮಾಡಲಿ ಎಂದು ಇಷ್ಟು ವರ್ಷಗಳ ಕಾಲ ಒತ್ತಾಯ ಮಾಡುತ್ತಲೆ ಬಂದಿದ್ದೀವಿ ಎಂದಿದ್ದಾರೆ.

ಇನ್ನು ತುಮಕೂರು ಲೋಕಸಭೆಗೂ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷ ಇನ್ನು ಅಭ್ಯರ್ಥಿಗಳ ಹೆಸರನ್ನು ಫೈನಲ್ ಆಗಿ ಹೇಳಿಲ್ಲ. ಆದರೆ ವಿಧಾನಸಭೆಯಲ್ಲಿ ಸೋತ ಸೋಮಣ್ಣ ಅವರು ತುಮಕೂರು ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದು, ತುಮಕೂರಿನಲ್ಲಿ ಸಂಚಾರ ನಡೆಸುತ್ತಿದ್ದಾರೆ. ಆದರೆ ತುಮಕೂರಿನಲ್ಲಿ ಬಿಜೆಪಿ ನಾಯಕರೇ ವಿ ಸೋಮಣ್ಣ ಅವರ ಸ್ಪರ್ಧೆಗೆ ನಿರಾಕರಣೆ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment