2023ರ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕಾಂಗ್ರೆಸ್ ಹೊಸ ಹೊಸ ಐಡಿಯಾಲಜಿ ಉಪಯೋಗಿಸುತ್ತಿದೆ. ಮಹಿಳೆಯರಿಗಾಗಿ ಅದಾಗಲೇ ಪ್ರಿಯಾಂಕ ಗಾಂಧಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಾಶಸ್ತ್ಯ ನೀಡಿದ್ದರು. ಇದೀಗ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲೂ ಅದನ್ನು ಅನುಕರಿಸಲು ಪ್ರಯತ್ನ ನಡೆಯುತ್ತಿದೆ.
ಇಂದು ನಾ ನಾಯಕಿ ಎಂಬ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಹಿಳೆಯರು ಸೇರುವ ನಿರೀಕ್ಷೆ ಇದೆ. ಚುನಾವಣೆಯಲ್ಲಿ ರಾಜ್ಯದ ಮಹಿಳೆಯರು ಹೆಚ್ಚಿನ ಮತ ಪಡೆಯಬೇಕು ಎಂಬ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಹಾಗೇ ಈ ಬಾರಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ.
ಇನ್ನು ನಾ ನಾಯಕಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ, ಪ್ರಿಯಾಂಕ ಗಾಂಧಿ ಭೇಟಿ ನೀಡುತ್ತಿದ್ದಾರೆ. ಪ್ರಿಯಾಂಕ ಗಾಂಧಿ ಮುಂದೆ ಕಾಂಗ್ರೆಸ್ ನ ಮಹಿಳಾ ನಾಯಕಿಯರು ತಮ್ಮ ಬೇಡಿಕೆ ಇಡಲಿದ್ದಾರೆ. ಈ ಬಾರಿ ಸುಮಾರು 30 ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡಬೇಕೆಂಬುದು ಅವರ ಬೇಡಿಕೆಯಾಗಿದೆ. ಇನ್ನು ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1,500 ರೂಪಾಯಿ ಪ್ರತಿ ತಿಂಗಳು ನೀಡುವುದಾಗಿ ಘೋಷಣೆ ಮಾಡಿದೆ. ಆದ್ರೆ ಯಾವ ರೀತಿಯಾಗಿ ನೀಡುತ್ತೆ ಎಂಬುದಕ್ಕೂ ಇಂದು ಉತ್ತರ ಸಿಗಲಿದೆ.ಕಾಂಗ್ರೆಸ್ ನ ʻನಾ ನಾಯಕಿʼಯಿಂದ ಮಹಿಳೆಯರಿಗೆ ಸಿಗಲಿದೆಯಾ ಬಂಪರ್ ಉಡುಗೊರೆ..?
2023ರ ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕಾಂಗ್ರೆಸ್ ಹೊಸ ಹೊಸ ಐಡಿಯಾಲಜಿ ಉಪಯೋಗಿಸುತ್ತಿದೆ. ಮಹಿಳೆಯರಿಗಾಗಿ ಅದಾಗಲೇ ಪ್ರಿಯಾಂಕ ಗಾಂಧಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಪ್ರಾಶಸ್ತ್ಯ ನೀಡಿದ್ದರು. ಇದೀಗ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲೂ ಅದನ್ನು ಅನುಕರಿಸಲು ಪ್ರಯತ್ನ ನಡೆಯುತ್ತಿದೆ.
ಇಂದು ನಾ ನಾಯಕಿ ಎಂಬ ಕಾರ್ಯಕ್ರಮ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಹಿಳೆಯರು ಸೇರುವ ನಿರೀಕ್ಷೆ ಇದೆ. ಚುನಾವಣೆಯಲ್ಲಿ ರಾಜ್ಯದ ಮಹಿಳೆಯರು ಹೆಚ್ಚಿನ ಮತ ಪಡೆಯಬೇಕು ಎಂಬ ಉದ್ದೇಶ ಈ ಕಾರ್ಯಕ್ರಮದ್ದಾಗಿದೆ. ಹಾಗೇ ಈ ಬಾರಿ ಮಹಿಳೆಯರಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ.
ಇನ್ನು ನಾ ನಾಯಕಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ, ಪ್ರಿಯಾಂಕ ಗಾಂಧಿ ಭೇಟಿ ನೀಡುತ್ತಿದ್ದಾರೆ. ಪ್ರಿಯಾಂಕ ಗಾಂಧಿ ಮುಂದೆ ಕಾಂಗ್ರೆಸ್ ನ ಮಹಿಳಾ ನಾಯಕಿಯರು ತಮ್ಮ ಬೇಡಿಕೆ ಇಡಲಿದ್ದಾರೆ. ಈ ಬಾರಿ ಸುಮಾರು 30 ಟಿಕೆಟ್ ಗಳನ್ನು ಮಹಿಳೆಯರಿಗೆ ನೀಡಬೇಕೆಂಬುದು ಅವರ ಬೇಡಿಕೆಯಾಗಿದೆ. ಇನ್ನು ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1,500 ರೂಪಾಯಿ ಪ್ರತಿ ತಿಂಗಳು ನೀಡುವುದಾಗಿ ಘೋಷಣೆ ಮಾಡಿದೆ. ಆದ್ರೆ ಯಾವ ರೀತಿಯಾಗಿ ನೀಡುತ್ತೆ ಎಂಬುದಕ್ಕೂ ಇಂದು ಉತ್ತರ ಸಿಗಲಿದೆ.