Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ ಅಭಿವೃದ್ಧಿಗೆ ಶ್ರಮಿಸುವೆ : ನಗರಸಭೆ ನೂತನ ಅಧ್ಯಕ್ಷೆ ಶಿಲ್ಪ ಮುರಳಿ ಭರವಸೆ 

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜೂನ್. 30 : ನಗರದ ನಗರಸಭೆಗೆ ನಾಲ್ಕನೇ ವಾರ್ಡಿನ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶಿಲ್ಪ ಮುರಳಿ ನಗರಸಭೆಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಶಾಸಕ ಟಿ ರಘುಮೂರ್ತಿ ಶಿಲ್ಪಾರವರನ್ನು ಅಭಿನಂದಿಸಿ ಮಾತನಾಡಿ ನಗರಸಭೆ ಅಧ್ಯಕ್ಷೆ ಸ್ಥಾನ ಬಿಸಿಎಂ ಬಿ ಮಹಿಳೆಗೆ ಮೀಸಲಾಗಿತ್ತು. ಆದಕಾರಣ ಶಿಲ್ಪ ಮುರಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಚಳ್ಳಕೆರೆ ನಗರಸಭೆಯ ಅಧಿಕಾರವಧಿ ನವೆಂಬರ್ ನಾಲ್ಕಕ್ಕೆ ಕೊನೆಗೊಳ್ಳಲಿದೆ. ಶಿಲ್ಪ ರವರು ನಗರದ ಎಲ್ಲಾ ವಾರ್ಡ್ ಗಳ ಸಮಸ್ಯೆಗಳನ್ನು ಅರಿತು ಸಾರ್ವಜನಿಕರ ಕುಂದು ಕೊರತೆಗಳಿಗೆ ಅನುಸಾರ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.

ನೂತನ ಅಧ್ಯಕ್ಷೆ ಶಿಲ್ಪಾ ಮಾತನಾಡಿ ನನ್ನನ್ನು ನಗರ ಸಭೆ ಅಧ್ಯಕ್ಷರನ್ನಾಗಲು ಸಹಕರಿಸಿದ ಶಾಸಕ ಟಿ ರಘುಮೂರ್ತಿ ಚಿತ್ರದುರ್ಗ ಶಾಸಕ ಕೆ ಸಿ ವೀರೇಂದ್ರ ಮಾಜಿ ನಗರಸಭಾ ಸದಸ್ಯ ಕೆ ಸಿ ನಾಗರಾಜ್ ರವರಿಗೆ ಚಿರೃಣಿಯಾಗಿರುತ್ತೇನೆ. ಶಾಸಕರ ಮಾರ್ಗದರ್ಶನದಲ್ಲಿ ಹಾಗೂ ಎಲ್ಲಾ ಸದಸ್ಯರ ಸಹಮತ ಪಡೆದು ನಗರದ ಅಭಿವೃದ್ಧಿಗೆ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು ಹಾಗೂ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment