Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುದೋಳ, ಬಾಗಲಕೋಟೆಯ ರೀತಿಯಲ್ಲಿ ಚಿತ್ರದುರ್ಗ ಜಿಲ್ಲೆಯನ್ನು ಅಭಿವೃದ್ಧಿ ಮಾಡಲು ನನ್ನನ್ನು ಗೆಲ್ಲಿಸಿ : ಗೋವಿಂದ ಕಾರಜೋಳ ಮನವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 11: 2014 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪಾರ್ಲಿಮೆಂಟ್ ಪ್ರವೇಶಿಸಿದ ಕಾಂಗ್ರೆಸ್‍ನ ಬಿ.ಎನ್.ಚಂದ್ರಪ್ಪನವರ ಸಾಧನೆ ಮಾತ್ರ ಶೂನ್ಯ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳ ಆಪಾದಿಸಿದರು.

ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್‍ರವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಬುದ್ದರು ಹಾಗೂ ಪ್ರಮುಖ ಉದ್ಯಮಿಗಳ ಜೊತೆ ಮಾತನಾಡಿದ ಗೋವಿಂದ ಕಾರಜೋಳರವರು ಹತ್ತು ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಸುರಕ್ಷಿತವಾಗಿ ಮನ್ನಡೆಸಿಕೊಂಡು ಹೋದ ನರೇಂದ್ರಮೋದಿರವರು 2023-24 ನೇ ಸಾಲಿನ ಬಜೆಟ್‍ನಲ್ಲಿ ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗಕ್ಕೆ ನೀರು ಒದಗಿಸುವ ಅಪ್ಪರ್‍ಭದ್ರಾ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದಾರೆ. ಐದು ವರ್ಷಗಳ ಕಾಲ ಲೋಕಸಭಾ ಸದಸ್ಯರಾಗಿದ್ದ ಬಿ.ಎನ್.ಚಂದ್ರಪ್ಪ ಹೈವೇ ಹಾಗೂ ನೀರಾವರಿ ಮಂತ್ರಿಗಳ ಪಕ್ಕದಲ್ಲಿ ಕುಳಿತುಕೊಳ್ಳಲು ಆಗದೆ ಐದು ವರ್ಷಗಳ ಕಾಲ ವಿನಾ ಕಾಲಹರಣ ಮಾಡಿದರು.

ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಪಾರ್ಲಿಮೆಂಟ್‍ಗೆ ಕಳಿಸಿಕೊಟ್ಟರೆ ಮುದೋಳ, ಬಾಗಲಕೋಟೆಯಲ್ಲಿ ಯಾವ ರೀತಿ ಅಭಿವೃದ್ದಿಪಡಿಸಿದ್ದೇನೋ ಚಿತ್ರದುರ್ಗ ಜಿಲ್ಲೆಯನ್ನು ಅದೇ ರೀತಿ ಅಭಿವೃದ್ದಿಯತ್ತ ಕೊಂಡೊಯ್ಯುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆಂದು ಭರವಸೆ ನೀಡಿದರು.

ಬಿ.ಎಸ್.ಯಡಿಯೂರಪ್ಪ ಹಾಗೂ ಬೊಮ್ಮಾಯಿರವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಸಮಾಜ ಕಲ್ಯಾಣ ಇಲಾಖೆ ಹಾಗೂ ನೀರಾವರಿ ಸಚಿವನಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೇನೆ. ಬಿಜಾಪುರ ಜಿಲ್ಲೆ ಮುದೋಳ ವಿಧಾನಸಭಾ ಕ್ಷೇತ್ರದಲ್ಲಿ ಸಾಕಷ್ಟು ವಸತಿ ಶಾಲೆ ಹಾಗೂ ಹಾಸ್ಟೆಲ್‍ಗಳನ್ನು ತೆರೆದು ಬಡ ಮಕ್ಕಳ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿದ್ದೇನೆ. ಮೂರನೆ ಬಾರಿಗೆ ನರೇಂದ್ರಮೋದಿ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಕಾರ್ಯಕರ್ತರು ಪ್ರತಿ ಬೂತ್‍ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ನಮ್ಮ ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸಿ ಹೆಚ್ಚಿನ ಬಹುಮತಗಳಿಂದ ಗೆಲ್ಲಿಸಿ ಪಾರ್ಲಿಮೆಂಟ್‍ಗೆ ಕಳಿಸಿಕೊಡಿ ಎಂದು ವಿನಂತಿಸಿದರು.

ಕೇಂದ್ರ ಸರ್ಕಾರ ಅಪ್ಪರ್‍ಭದ್ರಾ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿದೆ. ಇನ್ನು ರಾಜ್ಯ ಸರ್ಕಾರದ ಪಾಲೇನು ಎಂದು ಪ್ರಶ್ನಿಸಿದ ಗೋವಿಂದ ಕಾರಜೋಳರವರು ಎಲ್ಲದಕ್ಕೂ ಕೇಂದ್ರದ ಮೇಲೆ ಆಪಾದನೆ ಹೊರಿಸುವುದು ಸರಿಯಲ್ಲ. ಕೇಂದ್ರ ಮಂತ್ರಿಯಾಗಿದ್ದ ಎ.ನಾರಾಯಣಸ್ವಾಮಿ ಕೇಂದ್ರೀಯ ವಿದ್ಯಾಲಯಕ್ಕೆ ಒತ್ತು ನೀಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಇನ್ನು ಹೆಚ್ಚಿನ ಅಭಿವೃದ್ದಿ ಕೈಗೊಳ್ಳುವುದರ ಜೊತೆಗೆ ಚಿತ್ರದುರ್ಗದಲ್ಲಿ ವಿಮಾನ ನಿಲ್ದಾಣಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಇದರಿಂದ ವ್ಯಾಪಾರ, ವಹಿವಾಟು, ಪ್ರವಾಸೋದ್ಯಮ, ವಾಣಿಜ್ಯ ಚಟುವಟಿಕೆಗಳು ಗರಿಗೆದರಲಿದೆ ಎಂದರು.

ಕೀ ಓಟರ್ಸ್‍ಗಳು ನಿಮ್ಮ ನಿಮ್ಮ ಬೂತ್‍ಗಳಲ್ಲಿ ಮುನ್ನೂರಕ್ಕೂ ಹೆಚ್ಚು ಮತ ಹಾಕಿಸುವ ಶಕ್ತಿಯಿದೆ. ಸಮಯ ಕಡಿಮೆಯಿರುವುದರಿಂದ ಕ್ಷೇತ್ರದ ಎಲ್ಲಾ ಕಡೆ ಸುತ್ತಾಡುವುದು ಕಷ್ಟ. ಅದಕ್ಕಾಗಿ ನೀವುಗಳೇ ಅಭ್ಯರ್ಥಿ, ಪ್ರಧಾನಿಯಾಗಿ ಕೇಂದ್ರ ಸರ್ಕಾರದ ಯೋಜನೆಗಳ ಕರಪತ್ರಗಳನ್ನು ಹಂಚಿ ನನ್ನ ಗೆಲುವಿಗೆ ಕೈಜೋಡಿಸಿ ಎಂದು ವಿನಂತಿಸಿದರು.

ಕಾಂಗ್ರೆಸ್‍ನವರು ಐದು ಬಿಟ್ಟಿ ಗ್ಯಾರೆಂಟಿಗಳ ಆಸೆ ಹುಟ್ಟಿಸಿ ಮತದಾರರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯ ನಂತರೆ ಉಚಿತ ಗ್ಯಾರೆಂಟಿಗಳು ಮೂಲೆ ಗುಂಪಾಗುವುದು ಗ್ಯಾರೆಂಟಿ. ಅದಕ್ಕಾಗಿ ಕೀ ಓಟರ್ಸ್‍ಗಳು ಚುನಾವಣೆ ಮುಗಿಯುವತನಕ ನಿಮ್ಮ ನಿಮ್ಮ ಬೂತ್‍ಗಳಲ್ಲಿದ್ದುಕೊಂಡು ಕೆಲಸ ಮಾಡಿದರೆ ನನ್ನ ಗೆಲುವು ನಿಶ್ಚಿತ ಎಂದು ಹೇಳಿದರು.

ನ್ಯಾಯವಾದಿ ಸುರೇಶ್, ಇಂಜಿನಿಯರ್ ಎಂ.ಕೆ.ರವೀಂದ್ರ, ಐಶ್ವರ್ಯ ಫೋರ್ಟ್ ನ ಅರುಣ್‍ಕುಮಾರ್, ಕ್ರೀಡಾ ತರಬೇತುದಾರ ಸಾಧಿಕ್, ಅಶೋಕ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಣಪ್ಪ, ಬಿಜೆಪಿ. ಜಿಲ್ಲಾ ವಕ್ತಾರ ನಾಗರಾಜ್‍ಬೇದ್ರೆ, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಿಷ್ಣು, ಗುರು , ಸಿದ್ದರಾಮ,  ನಾಗೇಂದ್ರ, ರಾಮಚಂದ್ರ, ರಾಜಶೇಖರ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

error: Content is protected !!