ಶಿವಮೊಗ್ಗ: ಇತ್ತ ಮದ್ದೂರಿನಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ನಡೆದಿದೆ. ಬಿಗಿ ಪೊಲೀಸ್ ಭದ್ರತೆಯನ್ನ ಒದಗಿಸಲಾಗಿದೆ. ಇದರ ನಡುವೆ ಶಿವಮೊಗ್ಗದ ಶಾಸಕ ಮಾತೊಂದು ಚರ್ಚೆಗೆ ಗ್ರಾಸವಾಗಿದೆ. ಶಾಸಕ ಬಿಕೆ ಸಂಗಮೇಶ್ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವಾಸೆಯನ್ನ ವ್ಯಕ್ತಪಡಿಸಿದ್ದಾರೆ.
ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿರುವ ಸಂಗಮೇಶ್ ಅವರು, ನಾನು ನಾಲ್ಕು ಬಾರಿ ಶಾಸಕನಾಗಿ ನಿಮ್ಮ ಮುಂದೆ ಮಾತನಾಡುತ್ತಿದ್ದೇನೆ ಅಂದ್ರೆ ಅದಕ್ಕೆ ಕಾರಣ ಮುಸ್ಲಿಂ ಬಾಂಧವರು. ಮುಂದಿನ ದಿನಗಳಲ್ಲಿ ಪುತ್ರ ಗಣೇಶನ ಮೇಲೆ ನಿಮ್ಮ ಆಶೀರ್ವಾದ ಇರಲಿ. ನಿಮ್ಮ ಮನೆಯ ಮಗನಾಗಿ ಕೊನೆಯವರೆಗೂ ಇರುತ್ತೇನೆ. ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ, ಮುಸ್ಲಿಂ ಆಗಿ ಹುಟ್ಟಬೇಕು ಅಂತ ಬಯಸ್ತೀನಿ. ಈ ಕಾರ್ಯಕ್ರಮಕ್ಕೆ ಬಹಳ ಪ್ರೀತಿಯಿಂದ ಕರೆಸಿದ ಎಲ್ಲರಿಗೂ ಧನ್ಯವಾದಗಳು ಎಂದರು.
ಇದೇ ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುತ್ತಿರುವ ವಿಡಿಯೋ ಒಂದು ಬಾರೀ ಚರ್ಚೆಗೆ ಕಾರಣವಾಗ್ತಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದ ತರೀಕೆರೆ ರಸ್ತೆಯಲ್ಲಿರುವ ಗಾಂಧಿ ವೃತ್ತದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ವೈರಲ್ ಆಗಿದೆ. ಕಳೆದ ರಾತ್ರಿ 8 ಗಂಟೆಗೆ ಈದ್ ಮಿಲಾದ್ ಮೆರವಣಿಗೆ ನಡೆದಿದೆ. ಅದಕ್ಕಾಗಿ ಗಾಂಧಿ ವೃತ್ತದಲ್ಲಿ ಅಳವಡಿಸಲಾಗಿದ್ದ ಡಿಜೆ ಸೌಂಡಿಗೆ ಕುಣಿಯುವಾಗ ಕೆಲ ಕಿಡಿಗೇಡಿಗಳು, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸದ್ಯ ರಾಜ್ಯದಲ್ಲಿ ಈ ರೀತಿಯಾದ ಸುದ್ದಿಯೇ ಜೋರಾಗಿ ಸದ್ದು ಮಾಡ್ತಿದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






