Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು : 20 ಕ್ಕೂ ಹೆಚ್ಚು ಜನರು ಅಸ್ವಸ್ಥ, ಜಿಲ್ಲಾ ಆಸ್ಪತ್ರೆಗೆ ದಾಖಲು

---Advertisement---

 

 

ಸುದ್ದಿಒನ್, ಚಿತ್ರದುರ್ಗ, (ಆ.01) : ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿದ ಘಟನೆ ಹೊರವಲಯದ ಕವಾಡಿಗರಹಟ್ಟಿಯಲ್ಲಿ  ನಡೆದಿದೆ.

ಇಂದು (ಮಂಗಳವಾರ) ಬೆಳಿಗ್ಗೆ ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ‌. ಆದರೆ ಮಂಜುಳಾ(21) ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಕರೆದೊಯ್ಯಲಾಗಿದೆ. ಇನ್ನುಳಿದವರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಬಳಿಕ ಜಿಲ್ಲಾ ಆಸ್ಪತ್ರೆಗೆ ಕವಾಡಿಗರಹಟ್ಟಿಯ ಗ್ರಾಮಸ್ಥರು ಸೇರಿದಂತೆ ಅಪಾರ ಜನರು ದೌಡಾಯಿಸಿದರು. ಈ ವೇಳೆ ಕುಟುಂಬ ಸದಸ್ಯರು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ DC, SP, Dy.SP, ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಆಗಮಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾ ಸರ್ಜನ್ ಬಸವರಾಜ ಅವರಿಗೆ ಸೂಚಿಸಿದರು. ಈ ಘಟನೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ. ತನಿಖೆ ನಂತರವಷ್ಟೇ ತಿಳಿಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...