ಸುದ್ದಿಒನ್, ಚಿತ್ರದುರ್ಗ, (ಆ.01) : ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿದ ಘಟನೆ ಹೊರವಲಯದ ಕವಾಡಿಗರಹಟ್ಟಿಯಲ್ಲಿ ನಡೆದಿದೆ.
ಇಂದು (ಮಂಗಳವಾರ) ಬೆಳಿಗ್ಗೆ ಕಲುಷಿತ ನೀರು ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಆದರೆ ಮಂಜುಳಾ(21) ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಕರೆದೊಯ್ಯಲಾಗಿದೆ. ಇನ್ನುಳಿದವರು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಬಳಿಕ ಜಿಲ್ಲಾ ಆಸ್ಪತ್ರೆಗೆ ಕವಾಡಿಗರಹಟ್ಟಿಯ ಗ್ರಾಮಸ್ಥರು ಸೇರಿದಂತೆ ಅಪಾರ ಜನರು ದೌಡಾಯಿಸಿದರು. ಈ ವೇಳೆ ಕುಟುಂಬ ಸದಸ್ಯರು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ DC, SP, Dy.SP, ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಆಗಮಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾ ಸರ್ಜನ್ ಬಸವರಾಜ ಅವರಿಗೆ ಸೂಚಿಸಿದರು. ಈ ಘಟನೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ. ತನಿಖೆ ನಂತರವಷ್ಟೇ ತಿಳಿಯಲಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















