ಉಡುಪಿ: ವಿದ್ಯಾರ್ಥಿನಿಯರ ಶೌಚಾಲಯಕ್ಕೆ ಕ್ಯಾಮರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಇಂದು ಉಡುಪಿಗೆ ಭೇಟಿ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಜಿ ಪರಮೇಶ್ವರ್, ಮಹಿಳಾ ಆಯೋಗ ಮಣಿಪುರಕ್ಕೆ ಹೋಗಿಲ್ಲ. ಇಲ್ಲಿಗೆ ಬಂದಿದೆ ಎಂದಿದ್ದಾರೆ.
ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸತ್ಯಾಸತ್ಯತೆಯನ್ನು ತಿಳಿಯಲು ಹೇಳಿದ್ದೇನೆ. ನಿನ್ನೆ ಹೇಳಿದ್ದು ಬೇರೆ ಅರ್ಥದಲ್ಲಿ ಎಂದಿದ್ದಾರೆ.
ಇನ್ನು ಈ ಘಟನೆ ಸಂಬಂಧ ಜನಾಕ್ರೋಶ ಹೆಚ್ಚಾದ ಹಿನ್ನೆಲೆ ಮೂವರು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಡಿಯೋ ಮಾಡಿದ ಅಲಿಮತುಲ್ ಶೈಫಾ, ಶವಾನಾಜ್ ಮತ್ತು ಆಲಿಯಾ ವಿರುದ್ಧ ದೂರು ದಾಖಲಿಸಲಾಗಿದೆ. ಸೆಕ್ಷನ್ 509, 204, 175, 34 ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ.