Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆಯರು, ವಿಕಸಿತ ಭಾರತಕ್ಕೆ ಪ್ರೇರಕ ಶಕ್ತಿ : ಡಾ.ಜಿ. ಎನ್. ಮಲ್ಲಿಕಾರ್ಜುನಪ್ಪ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ವಿಜ್ಞಾನ ಕ್ಷೇತ್ರದಲ್ಲಿರುವ ಮಹಿಳೆಯರು ಸಂಶೋಧನೆ, ಆವಿಷ್ಕಾರ, ಆರೋಗ್ಯ, ಪರಿಸರ ರಕ್ಷಣೆ ಮತ್ತು ತಂತ್ರಜ್ಞಾನ ವಿಕಾಸದಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಿದ್ದಾರೆ. ಎಂದು ಡಾ.ಜಿ. ಎನ್. ಮಲ್ಲಿಕಾರ್ಜುನಪ್ಪ ತಿಳಿಸಿದರು.

ಅವರು ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಸಭಾಂಗಣದಲ್ಲಿ ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 

“ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ದೇಶದ ಆರ್ಥಿಕ, ಸಾಮಾಜಿಕ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಹೊಸ ವೇಗ ನೀಡುತ್ತದೆ. ವಿಕಸಿತ ಭಾರತ ಎಂದರೆ ಆರ್ಥಿಕವಾಗಿ, ತಾಂತ್ರಿಕವಾಗಿ ಮತ್ತು ವೈಜ್ಞಾನಿಕವಾಗಿ ಶಕ್ತಿಶಾಲಿ ರಾಷ್ಟ್ರ. ದೇಶದ ಅಭಿವೃದ್ಧಿಯ ಗುರಿ ಸಾಧಿಸಲು ವಿಜ್ಞಾನದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಅಗತ್ಯ. ಮಹಿಳೆಯರು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಂಶೋಧನೆಗೆ ಹೆಚ್ಚು ಆಸಕ್ತಿ ತರಲಿ ವಿಜ್ಞಾನದಿಂದ ಶಕ್ತಿ, ವಿಜ್ಞಾನದಿಂದ ಪ್ರಗತಿ ಸಾಧ್ಯ” ಎಂದು ತಿಳಿಸಿದರು.

 

ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಮೂಲಕ ಉಪನ್ಯಾಸ ನೀಡಿದ ಚಳ್ಳಕೆರೆ ಯರ್ರಿಸ್ವಾಮಿ ಮಾತನಾಡಿ, “ಈ ದಿನವು ಭಾರತೀಯ ವಿಜ್ಞಾನ ಕ್ಷೇತ್ರದ ಮಹತ್ವವನ್ನು ಸ್ಮರಿಸುವುದು ಅಷ್ಟೇ ಅಲ್ಲ, ಯುವಪೀಳಿಗೆಗೆ ಸಂಶೋಧನಾ ಮನೋಭಾವವನ್ನು ಬೆಳೆಸುವ ಉದ್ದೇಶವೂ ಆಗಿದೆ. ರಾಮನ್ ರ ಆವಿಷ್ಕಾರ ವಿಜ್ಞಾನ ಸಂಶೋಧನೆಗೆ ಹೊಸ ದಿಕ್ಕು ದೊರಕಿತು. ಯುವಕರಲ್ಲಿ ಕುತೂಹಲ, ಸಂಶೋಧನಾ ಮನೋವೃತ್ತಿ ಮತ್ತು ಪ್ರಯೋಗಶೀಲತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದೇಶದ ಅಭಿವೃದ್ಧಿಗೆ ಇದನ್ನು ನೆನಪಿಸುವ ದಿನವೇ ರಾಷ್ಟ್ರೀಯ ವಿಜ್ಞಾನ ದಿನ ಎಂದು ತಿಳಿಸಿದರು.

 

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ, ಪ್ರೊ.ರವಿಕಾಂತ ಮಾತನಾಡಿ, ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಮೂಲಕ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕ ಚಿಂತನೆ ಬೆಳೆಸಿಕೊಳ್ಳಿ ಎಂದರು.
ಕಾರ್ಯಕ್ರಮದ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಎಂ. ಎನ್.ವಿದ್ಯಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಲಾಲ್ ಸಿಂಗ್ ನಾಯಕ್ ರಾಷ್ಟ್ರೀಯ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಿದರು.

ವೇದಿಕೆಯಲ್ಲಿ ಪ್ರೊ. ಜೆ.ನಾಗರಾಜು, ಈ.ರುದ್ರಮುನಿ, ನಾಗಲಿಂಗರೆಡ್ಡಿ, ಇದ್ದರು. ಕಾಲೇಜಿನ ಪ್ರಾಧ್ಯಾಪಕರುಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಕು.ಸಾವಿತ್ರಿ ಪ್ರಾರ್ಥಿಸಿ, ಕು.ವರ್ಷಿಣಿ ವಂದಿಸಿದರು. ಕಾರ್ಯದರ್ಶಿ ಎಚ್.ಎಸ್. ಟಿ.ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now