Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

---Advertisement---

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದು, ಇದೀಗ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ನೋಟೀಸ್ ಜಾರಿ ಮಾಡಿದೆ. ಐದಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳಿಗೆ ನೋಟೀಸ್ ನೀಡಿದೆ‌.

ಸರ್ಕಾರಿ ಅಧಿಕಾರಿಗಳಿಗೆ ಎಸ್ಐಟಿ ಪೊಲೀಸರು 41A ಅಡಿಯಲ್ಲಿ ನೋಟೀಸ್ ಜಾರಿ ಮಾಡಿದ್ದಾರೆ. ವಿಚಾರಣೆಯಲ್ಲಿ ಈ ವಿಡಿಯೋದಲ್ಲಿ ಇರೋದು ನೀವೇನಾ ಅಂತ ಪ್ರಶ್ನೆ ಮಾಡಲಾಗಿದೆ. ಸಂತ್ರಸ್ತೆಯರು ಒಂದು ವೇಳೆ ವಿಡಿಯೋದಲ್ಲಿರೋದನ್ನು ಒಪ್ಪಿಕೊಂಡರೆ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆ ಆಗುವುದು ಕಟ್ಟಿಟ್ಟ ಬುತ್ತಿ. ಜೊತೆಗೆ ಮಹಿಳಾ ಅಧಿಕಾರಗಳಿಗೂ ಶಿಕ್ಷೆಯಾಗಲಿದೆ.

ಈಗಾಗಲೇ ನಾಲ್ಕು ಜನ ಸಂತ್ರಸ್ತೆಯರು ಎಸ್ಐಟಿ ಕಚೇರಿಯಲ್ಲಿದ್ದು, ಅವರಿಗೆಲ್ಲಾ‌ ಮೆಡಿಕಲ್ ಚೆಕಪ್ ಮಾಡಿಸಲಾಗಿದೆ. ಈಗಾಗಲೇ ಲೈಂಗಿಕ ದೌರ್ಜನ್ಯ ನಡೆದಿರುವುದ ಸಾಬೀತಾಗಿದೆ‌.‌ ನಾಲ್ಕು ಮಂದಿಯಿಂದ 164 ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಎಸ್ಐಟಿ ವಶದಲ್ಲಿರುವ ನಾಲ್ಕು ಮಹಿಳೆಯರಿಗೆ ರಕ್ಷಣೆ ನೀಡಲಾಗಿದೆ. ಆದರೆ ಮತ್ತಷ್ಟು ಮಂದಿ ಸಂತ್ರಸ್ತೆಯರು ಪೊಲೀಸರನ್ನು ಸಂಪರ್ಕಿಸುವ ಸಾಧ್ಯತೆ ಇದೆ. ದೂರು ನೀಡುವ ಸಾಧ್ಯತೆಯೂ ಇದೆ. ಆದರೆ ಆರೋಪಿಗಳು ಪೊಲೀಸರಿಗೆ ಸಂತ್ರಸ್ತೆಯರು ಸಿಗದಂತೆ ಮಾಡುವ ಸಾಧ್ಯತೆಯೂ ಹೆಚ್ಚಾಗಿದೆ. ಎಸ್ಐಟಿ ಪೊಲೀಸರು ಸಾಕಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಎಲ್ಲಾ ರೀತಿಯ ರಕ್ಷಣೆಯನ್ನು ಕೊಡುವುದಕ್ಕೆ ಎಸ್ಐಇ ಮುಂದಾಗಿದೆ. ಆದ್ರೆ ಸಂತ್ರಸ್ತೆಯರು ಧೈರ್ಯವಾಗಿ ಬಂದು ದೂರು ನೀಡಬೇಕಾಗಿದೆ‌.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...