Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಸವೇಶ್ವರ ಆಸ್ಪತ್ರೆಯಲ್ಲಿ ಮಹಿಳಾ ದಿನಾಚರಣೆ : 12ನೇ ಶತಮಾನದಲ್ಲಿಯೇ ಮಹಿಳೆಗೆ ಹೆಚ್ಚಿನ ಆದ್ಯತೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾ.08 : ಮಹಿಳೆಯರ ಬಗ್ಗೆ ಕೇವಲ ಅನುಕಂಪ ತೋರಿಸಿದರೆ ಸಾಲದು ಸಮಾನ ಅವಕಾಶವನ್ನು ಪ್ರತಿ ಕ್ಷೇತ್ರದಲ್ಲಿ ನೀಡಿದಾಗ ಬಲಿಷ್ಠ, ಆರೋಗ್ಯಪೂರ್ಣ ಮತ್ತು ಸಮಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು.

 

ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಾ, ಮಹಿಳೆ ಇಂದು ಎಲ್ಲ ರಂಗದಲ್ಲಿ ತನ್ನ ಇರುವಿಕೆಯನ್ನು ತೋರ್ಪಡಿಸುತ್ತಿರುವುದು ಮತ್ತು ಶಿಕ್ಷಣ ರಂಗದಲ್ಲಿ ಮೇಲುಗೈ ಸಾಧಿಸುತ್ತಿರುವುದು ಅವರೇ ಆಗಿದ್ದಾರೆ. ಹಾಗಾಗಿ ಪ್ರತಿಭೆಗೆ ತಕ್ಕ ಅವಕಾಶ ನೀಡಿದರೆ ಅಭಿವೃದ್ಧಿಯ ನಾಡು ನಿರ್ಮಾಣವಾಗಲು ಸಾಧ್ಯವಿದೆ. ಅದರಂತೆ ಮಹಿಳೆಗೆ ಅತ್ಯಂತ ಗೌರವ ಮತ್ತು ಉನ್ನತ ಸ್ಥಾನ ನೀಡಿದ್ದು 12ನೆಯ ಶತಮಾನ. ಹಾಗಾಗಿ ಲಿಂಗ ಅಸಮಾನತೆಯನ್ನು ತೊಡೆದು ಹಾಕಿದ್ದರಿಂದ 33 ಮಹಿಳೆಯರು ಅನುಭವ ಮಂಟಪದಲ್ಲಿ ಅವಕಾಶ ಪಡೆದು ಎಲ್ಲರೂ ವಚನ ರಚನೆ ಮಾಡಿದ್ದು ಬಹುದೊಡ್ಡ ಇತಿಹಾಸ ಎಂದರು.

ಹೆಣ್ಣು ಸಮಾಜದ ಕಣ್ಣು. ಆಕೆಗೆ ಸಂಸಾರದ ನೋಗ ಹೊತ್ತು ಅದನ್ನು ಸರಿಯಾಗಿ, ಜವಾಬ್ದಾರಿಯಿಂದ ನಿಭಾಯಿಸುವ ತಾಕತ್ತು ಇದೆ. ಅದಕ್ಕೆ ಮುಖ್ಯ ಕಾರಣ ಮಹಿಳೆಯಲ್ಲಿರುವ ತಾಳ್ಮೆ, ಸಹನೆ. ಮಹಿಳೆಯರು ಇನ್ನೂ ಕೂಡ ಸಮಾಜದಲ್ಲಿ ಕೆಲ ಕ್ಷೇತ್ರಗಳಲ್ಲಿ ಧೈರ್ಯದಿಂದ ಭಾಗವಹಿಸಲು ಮುಜುಗರ, ಅಂಜಿಕೆ ಪಡುತ್ತಿದ್ದು, ದಿಟ್ಟತನದಿಂದ ಎಲ್ಲ ರಂಗದಲ್ಲಿ ಭಾಗವಹಿಸಬೇಕು. ಇತ್ತೀಚೆಗೆ ಆಕೆ ಎಲ್ಲ ರಂಗದಲ್ಲಿ ಉನ್ನತ ಸ್ಥಾನಮಾನ ಪಡೆಯುತ್ತಿರುವುದು ಆಶಾದಾಯಕ ಬೆಳವಣಿಗೆ. ಇದು ಇನ್ನೂ ಹೆಚ್ಚಿನ ರೀತಿಯಲ್ಲಿ ಮುಂದುವರಿಯಬೇಕೆಂದು ಆಶಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಡೀನ್‍ರಾದ ಡಾ. ಪ್ರಶಾಂತ್, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ್, ಡಾ. ಲತಾ, ಡಾ. ನಂದಿನಿ ಹಾಗೂ ಡಾ. ನಾಗೇಂದ್ರ ಗೌಡ ಅವರುಗಳು ಸೇರಿದಂತೆ ಕಾಲೇಜಿನ ಇತರ ವೈದ್ಯರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...