ಚಿತ್ರದುರ್ಗ, (ನವೆಂಬರ್.23) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಅಂಗವಾಗಿ ಮಹಿಳಾ ದಿನ ಹಾಗೂ ವಿವಿಧ ಮಹಿಳಾ ಸಂಘಟನೆಗಳಿಂದ ಮ್ಯಾರಥಾನ್ ಓಟ ಕಾರ್ಯಕ್ರಮವನ್ನು ನವೆಂಬರ್ 24ರಂದು ಬೆಳಿಗ್ಗೆ 9ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಸ್.ರಾಜಾನಾಯ್ಕ್, ಚಿತ್ರ ಡಾನ್‍ಬೋಸ್ಕೊ ಸಂಸ್ಥೆ ನಿರ್ದೇಶಕ ಫಾದರ್ ಜೋಸೆಪ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿವಿಧ ಮಹಿಳಾ ಸಂಘಟನೆಗಳಿಂದ ಮ್ಯಾರಾಥಾನ್ ಓಟ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಪ್ರಾರಂಭಿಸಿ ಮದಕರಿ ನಾಯಕ ವೃತ್ತ, ಹಳೇ ವೈಶಾಲಿ ವೃತ್ತದಿಂದ ಸ್ಟೇಡಿಯಂ ಹತ್ತಿರವಿರುವ ಬಾಲಭವನ ಆವರಣದವರೆಗೆ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…