Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಮಾಜದ ಮುಖ್ಯವಾಹಿನಿಗೆ ಮಹಿಳೆಯರ ಆಗಮನ ಅಗತ್ಯ: ಡಾ. ಆರ್. ಶಿವಕುಮಾರ್ ಕರೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 07 : ಕುಟುಂಬ ನಿರ್ವಹಣೆಗೆ ಮೀಸಲಾಗಿರುವ ಮಹಿಳೆ ತನ್ನ ಆರೋಗ್ಯದ ಕಡೆಗೂ ಗಮನ ಕೊಡಲು ಆಗದಂತ ಪರಿಸ್ಥಿತಿಯಲ್ಲಿರುವುದರಿಂದ ಇಂತಹ ವೇದಿಕೆಗಳ ಮೂಲಕ ತನ್ನಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳುವಂತೆ ಹೆಚ್ಚುವರಿ ರಕ್ಷಣಾಧಿಕಾರಿ ಡಾ.ಆರ್.ಶಿವಕುಮಾರ್ ಮಹಿಳೆಯರಿಗೆ ಕರೆ ನೀಡಿದರು.

 

ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆಯಿಂದ ಚೋಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

 

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಕೀಳರಿಮೆ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಆಗ ಮಾತ್ರ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಲು ಸಾಧ್ಯ. ಸಂಸಾರ ನಿರ್ವಹಣೆ ಜೊತೆ ಹೊರಗಡೆಯೂ ಮಹಿಳೆ ದುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಒಮ್ಮೊಮ್ಮೆ ತನ್ನ ವೈಯಕ್ತಿಕ ಸಮಸ್ಯೆ ಸವಾಲುಗಳನ್ನು ಎದುರಿಸಲು ಆಗುವುದಿಲ್ಲ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿಯಾದರೂ ಮಹಿಳೆಯರು ಒಂದು ಕಡೆ ಸೇರಿ ತಮ್ಮ ಆಗು ಹೋಗುಗಳ ಕುರಿತು ಚರ್ಚಿಸುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.

 

ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಸಿ.ಓ.ಸುಧಾ, ಕೃಷಿ ಇಲಾಖೆ ಉಪ ನಿರ್ದೇಶಕ ಶಿವಕುಮಾರ್, ಲೇಖಕ ಹೆಚ್.ಆನಂದ್‍ಕುಮಾರ್, ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷೆ ಹೆಚ್.ಭಾರತಿ, ಜಿಲ್ಲಾಧ್ಯಕ್ಷೆ ಪ್ರಿಯಾಂಕ ಪ್ರತಾಪ್, ರಾಜ್ಯ ಕಾರ್ಯದರ್ಶಿ ಶಂಕ್ರಮ್ಮ, ತಾಲ್ಲೂಕು ಅಧ್ಯಕ್ಷೆ ಶ್ರೀದೇವಿ, ಜಿಲ್ಲಾ ಸಂಚಾಲಕಿ ದೇವಮ್ಮ, ಕಾರ್ಯದರ್ಶಿ ಲಕ್ಷ್ಮಮ್ಮ, ಭಾಗ್ಯಮ್ಮ, ಸುಧಾ, ಶಾರದಮ್ಮ, ಎನ್.ಆರ್.ಎಂ.ಎಲ್. ಒಕ್ಕೂಟದ ಅಧ್ಯಕ್ಷೆ ಮಂಜುಳ, ಚೋಳಗಟ್ಟ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಿರ್ಮಲ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ವೀರೇಶ್ ಇವರುಗಳು ವೇದಿಕೆಯಲ್ಲಿದ್ದರು.
ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now