ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ : ಹೊನ್ನಾಳಿಯ ಎಸ್.ಎಂ.ಎಸ್. ಪದವಿ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ತಂಡ ಬಂಗಾರದ ಪದಕ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದೆ.
ಮಹಿಳಾ ತಂಡದ ಅಭೂತಪೂರ್ವ ಸಾಧನೆಗೆ ಕಾಲೇಜು ಅಭಿವೃದ್ದಿ ಸಮಿತಿ ಅಧ್ಯಕ್ಷರು, ಸದಸ್ಯರು ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
