Connect with us

Hi, what are you looking for?

Home

ಸಿಧು ಬಹಿರಂಗವಾಗಿ ಕ್ಷಮೆಯಾಚಿಸದ ಹೊರತು ಮುಖ್ಯಮಂತ್ರಿ ಭೇಟಿ ಸಾಧ್ಯವಿಲ್ಲ !

ಸುದ್ದಿಒನ್ ನ್ಯೂಸ್ | ಚಂಡೀಗಢ, (ಜು.21) : ಪಂಜಾಬ್‌ನಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದೆ. ನವಜೋತ್ ಸಿಂಗ್ ಸಿಧು ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಪಂಜಾಬ್ ಪಿಸಿಸಿ ಜವಾಬ್ದಾರಿಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಮೆಯಾಚಿಸುವವರೆಗೂ ಸಿಧು ಅವರನ್ನು ಭೇಟಿಯಾಗುವುದಿಲ್ಲ ಎಂದು ಅಮರಿಂದರ್ ಈ ಹಿಂದೆ ಘೋಷಿಸಿದ್ದರು. ಈಗಲೂ ಅದೇ ಹೇಳಿಕೆಗೆ ಬದ್ಧರಾಗಿದ್ದಾರೆ ಎಂಬುದು ಇತ್ತೀಚಿನ ಬೆಳವಣಿಗೆಗಳಿಂದ ಸ್ಪಷ್ಟವಾಗಿದೆ.

ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ರವೀನ್ ತುಕ್ರಾಲ್ ಅವರ ಟ್ವೀಟ್ ಈಗ ವೈರಲ್ ಆಗಿದೆ. ” ನವಜೋತ್ ಸಿಂಗ್ ಸಿಧು ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ ಎಂಬುದು ಸುಳ್ಳು ಸುದ್ದಿ. ಮುಖ್ಯಮಂತ್ರಿಯ ನಿರ್ಧಾರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನವಜೋತ್ ಸಿಂಗ್ ಸಿಧು ಅವರ ವಿರುದ್ಧದ ಆರೋಪಗಳಿಗೆ ಬಹಿರಂಗವಾಗಿ ಕ್ಷಮೆಯಾಚಿಸುವವರೆಗೂ ಅಮರಿಂದರ್ ಸಿಂಗ್ ಅವರು ಸಿಧು ಅವರನ್ನು ಭೇಟಿಯಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಮತ್ತೊಂದೆಡೆ, ಪಂಜಾಬ್ ಸಚಿವ ಬ್ರಹ್ಮೋ ಮೋಹಿಂದ್ರಾ ಕೂಡ ಸಿದ್ಧು ಅವರನ್ನು ಭೇಟಿಯಾಗಲು ಇಷ್ಟಪಡುತ್ತಿಲ್ಲ. ಸಿಧು ಅವರನ್ನು ಪಂಜಾಬ್ ಪಿಸಿಸಿ ಮುಖ್ಯಸ್ಥರನ್ನಾಗಿ ನೇಮಿಸುವುದನ್ನು ನಾನು ಸ್ವಾಗತಿಸುತ್ತೇನೆ. ಆದರೆ ಸಿಧು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಅವರಿಬ್ಬರ ನಡುವಿನ ಭಿನ್ನಾಭಿಪ್ರಾಯಗಳು ಬಗೆಹರಿಸಿಕೊಳ್ಳುಔರೆಗೂ ನಾನು ಸಿಧು ಅವರನ್ನು ಭೇಟಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Latest

Home

  ಸುದ್ದಿಒನ್, ದಾವಣಗೆರೆ, (ಆ.05): ರೈತರಿಗೆ ಕೃಷಿ ಚಟುವಟಿಕೆ ಅತ್ಯವಶ್ಯಕವಾಗಿ ಬೇಕಾಗಿರುವ ಟ್ರಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳಿಗೆ ಎಂಆರ್‌ಪಿ ದರ ನಿಗದಿಪಡಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ದೆಹಲಿಯ ಕೃಷಿ ಭವನದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.05) : ಜನಸ್ನೇಹಿಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಅವರ ಹೆಸರು ಶಾಶ್ವತವಾಗಿರುತ್ತದೆ ಎಂಬುದು ಚಿತ್ರದುರ್ಗ ಜಿಲ್ಲಾಧಿಕಾರಿಯೇ ಸಾಕ್ಷಿಯಾಗಿದ್ದಾರೆ. ಜಿಲ್ಲೆಗೆ ಕಾಲಿಟ್ಟ ದಿನದಿಂದಲೂ ಜನರ ನೋವು ನಲಿವಿಗೆ ತಾಯಿಯಂತೆ ಕಿವಿಯಾಗಿದ್ದಾರೆ. ಮೊಳಕಾಲ್ಮೂರು...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಸಹಜ. ಸಾಕಷ್ಟು ಜನ ರೈತರ ಬೆಳೆ ನಾಶವಾಗಿದೆ. ಇದೀಗ ಮೂಡಿಗೆರೆ ತಾಲೂಕಿನ ಕಾರ್ ಬೈಲ್ ಗ್ರಾಮದಲ್ಲೂ ರೈತ ಬೆಳೆನಾಶವಾಗಿರೋ ಘಟನೆ ನಡೆದಿದೆ. ಕಾರ್ ಬೈಲ್ ಗ್ರಾಮದ ತೋಟವೊಂದಕ್ಕೆ...

ಪ್ರಮುಖ ಸುದ್ದಿ

ಬೆಂಗಳೂರು: ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಕ್ಸ್ಟ್ ಸಿಎಂ ಯಾರಾಗ್ತಾರೆ ಅನ್ನೋ ರೇಸ್ ನಲ್ಲಿ ತೀರಾ ಹತ್ತಿರದಲ್ಲಿ ಕಾಂಪೀಟೇಷನ್ ಕೊಟ್ಟವರು ಅರವಿಂದ್ ಬೆಲ್ಲದ್. ಸಾಕಷ್ಟು ಜನರು ಸಾಲಿನಲ್ಲಿದ್ರು ಅರವಿಂದ್ ಬೆಲ್ಲದ್...

ಪ್ರಮುಖ ಸುದ್ದಿ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 5 ಜನ ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಎಂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ರನ್ನ ನೇಮಕ ಮಾಡಲಾಗಿದೆ. ವಾರ್ತಾ...

ಪ್ರಮುಖ ಸುದ್ದಿ

  ಸುದ್ದಿಒನ್, ಚಿತ್ರದುರ್ಗ, (ಆ.05) : ಹಿಂದುಳಿದ ವರ್ಗಗಳ ನಾಯಕಿ, ರಾಜ್ಯದ ಗೊಲ್ಲ ಸಮುದಾಯದ ಏಕೈಕ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದಕ್ಕೆ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ...

You May Also Like

ಆರೋಗ್ಯ

ಮಾಹಿತಿ: ಮಂಜುನಾಥ ಯಾದವ್ (97417 38979) ಬೇಳೆಕಟ್ಟು ಸಾರು ಅಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಎರಡ್ಮೂರು ದಿನ ಕೂಡ ಈ ಸಾಂಬಾರ್ ತಿನ್ನೋದು ಅಂದ್ರೆ ಟೇಸ್ಟೋ ಟೇಸ್ಟೂ..ಆದ್ರೆ ಕೆಲವೊಬ್ರಿಗೆ ಈ ಸಾಂಬಾರ್ ಮಾಡೋಕೆ...

ಪ್ರಮುಖ ಸುದ್ದಿ

ಮುಂಬೈ : ಮುಂಬೈ ಬೆಡಗಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪೊಲೀಸರ ವಶದಲ್ಲಿದ್ದಾರೆ. ರಾಜ್ ಕುಂದ್ರಾ ವಿಚಾರಣೆ ನಡೆಯುತ್ತಿದ್ದು, ಒಂದೊಂದೆ ವಿಚಾರಗಳು ಬಯಲಿಗೆ ಬರ್ತಿವೆ. ಇದೀಗ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ರಾಜ್...

ಆರೋಗ್ಯ

ನಮ್ಮ ಸುತ್ತ ಮುತ್ತ ಸಣ್ಣ ಪುಟ್ಟ ಅಂಗಡಿಗಳಲ್ಲಿ ಸಿಗುವ ವಸ್ತುವನ್ನ ನಾವೂ ನೆಗ್ಲೆಕ್ಟ್ ಮಾಡ್ತೀವಿ. ಚಿಕ್ಕವರಿದ್ದಾಗ ಬಾಯಿ ಚಪ್ಪರಿಸಿಕೊಂಡು ತಿನ್ನುವ ಪದಾರ್ಥಗಳನ್ನ ಬೆಳೀತಾ ಬೆಳೀತಾ ಮರೆತೆ ಹೋಗ್ತೀವಿ. ಆದ್ರೆ ಅಂದು ಖುಷಿಗಾಗಿ ತಿನ್ನುವ...

ಪ್ರಮುಖ ಸುದ್ದಿ

ಕಾಬೂಲ್: ಕಂಧರ್ ಪ್ರಾಂತ್ಯದ ಜೀರೊಯ್ ಜಿಲ್ಲೆಯಲ್ಲಿ ಅಫ್ಘಾನಿಸ್ತಾನದ ಭದ್ರತಾ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ ಹೆಚ್ಚಿನ ಸಂಖ್ಯೆಯ ಉಗ್ರರು ಹತರಾಗಿದ್ದಾರೆ. ಮತ್ತೆ ಕೆಲವರು ಗಾಯಗೊಂಡಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ...

Copyright © 2021 Suddione. Kannada online news portal

error: Content is protected !!