ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಫೆ.18: ಜಿಲ್ಲೆಯಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಗಣನೀಯವಾಗಿ ಹೆಚ್ಚಳ ಮಾಡಲು ಅಗತ್ಯ ಪೂರ್ವಸಿದ್ಧತೆ ಹಾಗೂ ಕ್ರಮವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ಎಸ್‍ಎಸ್‍ಎಲ್‍ಸಿ ಶೈಕ್ಷಣಿಕ ಪ್ರಗತಿ ಹಾಗೂ ಪೂರ್ವ ಸಿದ್ಧತೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಇನ್ನು ಕೇವಲ 30 ದಿನಗಳು ಮಾತ್ರ ಬಾಕಿ ಉಳಿದಿದ್ದು, ಪರೀಕ್ಷಾ ಸಿದ್ಧತೆಗೆ ಅಮೂಲ್ಯವಾದ ಸಮಯವಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಶ್ರಮವಹಿಸಿ, ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಬಹಳ ಎಚ್ಚರಿಕೆಯಿಂದ ಕಲಿಕಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು. ಜಿಲ್ಲೆಗೆ ಉತ್ತಮ ಹಾಗೂ ಹೆಚ್ಚಿನ ಫಲಿತಾಂಶ ತರುವಲ್ಲಿ ತಮ್ಮಗಳ ಜವಾಬ್ದಾರಿ ಬಹಳವಿದೆ. ಆದ್ದರಿಂದ ಬಹಳ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ ಎಂದು ಸೂಚಿಸಿದ ಅವರು, ಫಲಿತಾಂಶ ಹೆಚ್ಚಳಕ್ಕೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಸಿದ್ಧತೆ ಮಾಡಿಕೊಂಡ ಬಗ್ಗೆ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕಳೆದ ಸಾಲಿಗಿಂತ ಪ್ರಸಕ್ತ ಸಾಲಿನಲ್ಲಿ ಶೇ.100ರಷ್ಟು ಫಲಿತಾಂಶ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಉತ್ತಮ ಫಲಿತಾಂಶ ಪಡೆದ ಶೇಕಡಾವಾರು ನೋಡಿಕೊಂಡು ಅಂತಹ ಅಧಿಕಾರಿಗಳಿಗೆ, ಮುಖ್ಯ ಶಿಕ್ಷಕರಿಗೆ ಮತ್ತು ಶಿಕ್ಷಕರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಸನ್ಮಾನಿಸಿ, ಗೌರವಿಸಲಾಗುವುದು. ಪರೀಕ್ಷಾ ಫಲಿತಾಂಶದ ಹೆಚ್ಚಳದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಶಿಕ್ಷಕರಿಗೆ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದಿನ್, ಜಿಲ್ಲೆಯ ಆರು ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಿ ವೈಪಿಸಿಗಳು, ಬಿಆರ್‍ಸಿ ಹಾಗೂ ವಿಷಯ ಪರಿವೀಕ್ಷಕರು ಮತ್ತು ಡಯಟ್‍ನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್