Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಾ.ಪಂ ಮತ್ತು ಜಿ.ಪಂ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಶ್ರಮಿಸಿ : ಜಿ.ಸಿ ಚಂದ್ರಶೇಖರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್,
ಚಿತ್ರದುರ್ಗ ಏ. 19 : ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ಆಕಾಂಕ್ಷಿಗಳ ಆಯ್ಕೆಯನ್ನು ಪಾರದರ್ಶಕವಾಗಿ ಮಾಡಬೇಕು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿರುವ ವೈಮನಸ್ಸನ್ನು ಬಿಡಬೇಕು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರ ನೀಡುವಂತೆ ರಾಜ್ಯಸಭಾ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ ಚಂದ್ರಶೇಖರ್ ಪಕ್ಷದ ಮುಖಂಡರಿಗೆ ಕಾರ್ಯಕರ್ತರಿಗೆ ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ 2016-17 ನೇ ಸಾಲಿನಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಚುನಾಯಿತರಾಗಿದ್ದ ಸದಸ್ಯರುಗಳೊಂದಿಗೆ ಹಾಗೂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದವರೊಂದಿಗೆ ಸಿಬಾರದ ಎಸ್. ನಿಜಲಿಂಗಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವಂತಹ ಸ್ಪರ್ಧಿಗಳ ಪರವಾಗಿ ಕೆಲಸ ಮಾಡಲು ಕಾರ್ಯಕರ್ತರ ಸನ್ನದ್ಧರಾಗ ಬೇಕಿದೆ.ಹಳ್ಳಿಗಳಲ್ಲಿ ನಮ್ಮ ಗ್ಯಾರಂಟಿಗಳು ಕೆಲಸ ಮಾಡುತ್ತಿವೆ.. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಿದೆ. ಇಂದಿನ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ವೈಮನಸ್ಸಿನಿಂದಾಗಿ ಕೆಲವು ಕಡೆ ನಮಗೆ ಸೋಲಾಗಿದೆ ಇದು ಪುನರಾವರ್ತನೆ ಆಗಬಾರದು. ನಿರಂತರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕು ಎಂದರು.

 

ವಿಧಾನಪರಿಷತ್ ಸದಸ್ಯರು ಹಾಗೂ ವಿಧಾನಸಭಾ ಸದಸ್ಯರು ತಾಲ್ಲೂಕುವಾರು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕ್ ಪಂಚಾಯಿತಿ ಮಾಜಿ ಸದಸ್ಯರುಗಳ ಸಭೆಗಳನ್ನು ಮಾಡಬೇಕು.ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಆಕಾಂಕ್ಷಿಗಳ ಆಕೆಯಲ್ಲಿ ಜನಪ್ರತಿನಿಧಿಗಳ ಬೆಂಬಲಿಗರೇ ಆಗಿರಬಾರದು ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕು.2016 ರ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯ ರೀತಿ ಈ ಬಾರಿಯ ಚುನಾವಣೆಯಲ್ಲಿ ಅದಕ್ಕಿಂತಲೂ ಹೆಚ್ಚು ಸ್ಥಾನಗಳ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

 

ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷರಾದ ಮುರುಳೀಧರ ಹಾಲಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್, ಶಾಸಕರುಗಳಾದ ಎನ್.ವೈ ಗೋಪಾಲಕೃಷ್ಣ, ಟಿ. ರಘುಮೂರ್ತಿ, ಬಿ.ಜಿ ಗೋವಿಂದಪ್ಪ, ಮಾಜಿ ರಾಜ್ಯಸಭಾ ಸದಸ್ಯರಾದ ಹೆಚ್. ಹನುಮಂತಪ್ಪ, ಮಾಜಿ ಸಚಿವರಾದ ಹೆಚ್. ಆಂಜನೇಯ,  ಮಾಜಿ ಶಾಸಕರಾದ ಉಮಾಪತಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಜಯಮ್ಮ ಬಾಲರಾಜ್, ನಿಗಮ ಮಂಡಳಿ ಅಧ್ಯಕ್ಷರುಗಳಾದ ಜಿ.ಎಸ್ ಮಂಜುನಾಥ, ಯೋಗೇಶ್ ಬಾಬು, ಗ್ಯಾರೆಂಟಿ ಪ್ರಾಧಿಕಾರದ ಅಧ್ಯಕ್ಷರಾದ ಶಿವಣ್ಣ, ಡಿಸಿಸಿ ಅಧ್ಯಕ್ಷ ತಾಜ್ ಪೀರ್, ಕೆ. ಪ್ರಧಾನ ಕಾರ್ಯದರ್ಶಿ ಪಿ. ಸಂಪತ್ ಕುಮಾರ್ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ಮುದಸಿರ್ ಖುದ್ದಸ್ ಅನಂತ ಕುಮಾರ್, ತಾಲ್ಲೂಕು ಗ್ಯಾರೆಂಟಿ ಅಧ್ಯಕ್ಷ ಪ್ರಕಾಶ್, ಪಕ್ಷದ ಮುಖಂಡರುಗಳಾದ ಹನುಮಲಿ ಷಣ್ಮುಖಪ್ಪ, ಸೋಮಶೇಖರ್ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment