Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸುವತ್ತ ಶ್ರಮ ವಹಿಸಿ : ಸಚಿವ ಮಧು ಬಂಗಾರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21  : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ಸರ್ಕಾರ ರಚನೆಯಾಗಿದೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಕೆಲಸ ಮಾಡಬೇಕಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕರ್ತರಿಗೆ ತಿಳಿಸಿದರು.

ಸಿರಿಗೆರೆ ತೆರಳುತ್ತಿದ್ದ ಅವರು ಗುರುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವಲ್ಲಿ ಕಾರ್ಯಕರ್ತರು ಈಗಿನಿಂದಲೆ ಶ್ರಮ ವಹಿಸಬೇಕು. ಇಷ್ಟು ದಿನ ಅಧಿಕಾರಕ್ಕೆ ಬರಲು ಹೋರಾಟ ಮಾಡಬೇಕಾಯಿತು. ಈಗ ಅಧಿಕಾರವನ್ನು ಗಟ್ಟಿಗೊಳಿಸಿಕೊಳ್ಳಬೇಕಿದೆ. ಅಧಿಕಾರ ಇರುವುದು ಸೇವೆ ಮಾಡುವುದಕ್ಕಾಗಿ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಕೆಲಸ ಮಾಡೋಣ. ಪಕ್ಷ ನನಗೆ ಅಧಿಕಾರ ಕೊಟ್ಟಿದೆ ಮುಂದಿನ ದಿನಗಳಲ್ಲಿ ಮತ್ತೆ ಬರುತ್ತೇನೆ. ಆಗ ಎಲ್ಲರೊಟ್ಟಿಗೆ ಇದ್ದು, ಚರ್ಚಿಸುತ್ತೇನೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ರೇಣುಕ ಶಿವು, ಉಪಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ನಗರಸಭೆ ಸದಸ್ಯೆ ಮೀನಾಕ್ಷಿ, ಕೆ.ಪಿ.ಸಿ.ಸಿ. ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಸೈಯದ್ ಖುದ್ದೂಸ್, ಸೇವಾದಳದ ಇಂದಿರಾ, ಸ್ವಾಮಿ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!