ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 21 : ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ಸರ್ಕಾರ ರಚನೆಯಾಗಿದೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಕೆಲಸ ಮಾಡಬೇಕಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಕಾರ್ಯಕರ್ತರಿಗೆ ತಿಳಿಸಿದರು.
ಸಿರಿಗೆರೆ ತೆರಳುತ್ತಿದ್ದ ಅವರು ಗುರುವಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವಲ್ಲಿ ಕಾರ್ಯಕರ್ತರು ಈಗಿನಿಂದಲೆ ಶ್ರಮ ವಹಿಸಬೇಕು. ಇಷ್ಟು ದಿನ ಅಧಿಕಾರಕ್ಕೆ ಬರಲು ಹೋರಾಟ ಮಾಡಬೇಕಾಯಿತು. ಈಗ ಅಧಿಕಾರವನ್ನು ಗಟ್ಟಿಗೊಳಿಸಿಕೊಳ್ಳಬೇಕಿದೆ. ಅಧಿಕಾರ ಇರುವುದು ಸೇವೆ ಮಾಡುವುದಕ್ಕಾಗಿ ಎನ್ನುವುದನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಕೆಲಸ ಮಾಡೋಣ. ಪಕ್ಷ ನನಗೆ ಅಧಿಕಾರ ಕೊಟ್ಟಿದೆ ಮುಂದಿನ ದಿನಗಳಲ್ಲಿ ಮತ್ತೆ ಬರುತ್ತೇನೆ. ಆಗ ಎಲ್ಲರೊಟ್ಟಿಗೆ ಇದ್ದು, ಚರ್ಚಿಸುತ್ತೇನೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕ ಕೆ.ಸಿ.ವೀರೇಂದ್ರಪಪ್ಪಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ರೇಣುಕ ಶಿವು, ಉಪಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಆರ್.ಗಂಗಾಧರ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಎನ್.ಡಿ.ಕುಮಾರ್, ನಗರಸಭೆ ಸದಸ್ಯೆ ಮೀನಾಕ್ಷಿ, ಕೆ.ಪಿ.ಸಿ.ಸಿ. ಮಹಿಳಾ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಸೈಯದ್ ಖುದ್ದೂಸ್, ಸೇವಾದಳದ ಇಂದಿರಾ, ಸ್ವಾಮಿ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…