Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಿ : ಮಾಜಿ ಶಾಸಕ ಎ.ವಿ.ಉಮಾಪತಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ತಟಸ್ಥರಾಗಿದ್ದ ಹೊಳಲ್ಕೆರೆ ತಾಲ್ಲೂಕಿನ ವೆಂಕಟೇಶ್‍ನಾಯ್ಕ, ಬಸವರಾಜ್‍ನಾಯ್ಕ, ಪುಟ್ಟನಾಯ್ಕ, ಮಂಜು ಮಹೇಂದ್ರ, ದೊರೆ ಮಲ್ಲಿಕಾರ್ಜುನ್ ಇವರುಗಳು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಹೊಳಲ್ಕೆರೆ ಮಾಜಿ ಶಾಸಕ ಎ.ವಿ.ಉಮಾಪತಿ ಇವರುಗಳ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡರು.

ಪಕ್ಷದ ಭಾವುಟ ನೀಡಿ ಸೇರ್ಪಡೆ ಮಾಡಿಕೊಂಡು ಮಾತನಾಡಿದ ಮಾಜಿ ಶಾಸಕ ಎ.ವಿ.ಉಮಾಪತಿ ಚಿತ್ರದುರ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಸೂಚಿಸಿದರು

ಭೀಮಸಮುದ್ರದ ಜಿ.ಎಸ್.ಮಂಜುನಾಥ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ನೇರ್ಲಗುಂಟೆ ರಾಮಪ್ಪ, ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧಾ ಶ್ರೀನಿವಾಸ್‍ಮೂರ್ತಿ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...