Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಕಚೇರಿಯಲ್ಲಿ ದಾವಣಗೆರೆ ಬಿಜೆಪಿ ನಾಯಕರ ಸಂಘರ್ಷ ಬಗೆಹರಿಸುವ ಕೆಲಸ : ಜೋಶಿ ನಾಯಕತ್ವ..!

---Advertisement---

ದಾವಣಗೆರೆ: ಬಿಜೆಪಿ ಪಕ್ಷದಲ್ಲೂ ಆಂತರಿಕ ಭಿನ್ನಾಭಿಪ್ರಾಯ ಜೋರಾಗಿದೆ. ಅದನ್ನ ಬಗೆಹರಿಸುವುದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮುಂದಾಗಿದ್ದಾರೆ. ನಾಳೆ ಬಿಜೆಪಿ ಕಚೇರಿಗೆ ರೇಣುಕಾಚಾರ್ಯ ಹಾಗೂ ತಂಡದ ಜೊತೆಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಸಭೆಗೆ ಹಾಜರಾಗುವಂತೆ ರೇಣುಕಾಚಾರ್ಯ ಹಾಗೂ ಅವರ ತಂಡಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

ದಾವಣಗೆರೆಯ ಲೋಕಸಭಾ ಚುನಾವಣೆಯ ಸೋಲಿನ ಬಗ್ಗೆ ಬಿಜೆಪಿ ನಾಯಕರಲ್ಲಿ ಇಂದಿಗೂ ಬೇಸರವಿದೆ. ಬರೀ ರಾಜ್ಯ ಬಿಜೆಪಿಯಲ್ಲಿ ಮಾತ್ರವಲ್ಲ, ಕೇಂದ್ರದ ವರಿಷ್ಠರು ಈ ಬಗ್ಗೆ ಬೇಸರ ವ್ಯಕ್ತಪಡಿಸಿರೋದಿದೆ. ಇತ್ತೀಚೆಗಷ್ಟೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಬಂದಾಗ, ರಾಜ್ಯ ನಾಯಕರ ಜೊತೆಗೆ ದಾವಣಗೆರೆ ಸೋಲಿನ ಬಗ್ಗೆ ಚರ್ಚೆ ಮಾಡಿದ್ದರು. ಆಗ ರೇಣುಕಾಚಾರ್ಯ ವಿಚಾರವೂ ಬಂದಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ್ದ ಮಾಜಿ ಸಂಸದ ಸಿದ್ದೇಶ್ವರ್ ಹಾಗೂ ಶಾಸಕ ಬಿ.ಪಿ.ಹರೀಶ್ ದಾವಣಗೆರೆ ಲೋಕಸಭಾ ಚುನಾವಣೆಯ ಸೋಲಿಗೆ ರೇಣುಕಾಚಾರ್ಯ ಮತ್ತು ತಂಡದ ಅಡ್ಜೆಸ್ಟಮೆಂಟ್ ಕಾರಣ ಎಂದು ದೂರು ನೀಡಿದ್ದರು.

ಈ ರೀತಿಯ ಭಿನ್ನಾಭಿಪ್ರಾಯದಿಂದ ಪಕ್ಷಕ್ಕೆ ಮತ್ತಷ್ಟು ನಷ್ಟವಾಗುವುದು ಎಂದು ಅರಿತಿರುವ ಹೈಕಮಾಂಡ್ ನಾಯಕರು ಪ್ರಹ್ಲಾದ್ ಜೋಶಿಗೆ ಸೂಚನೆ ನೀಡಿದೆ. ದಾವಣಗೆರೆಯಲ್ಲಿ ಬಿಜೆಪಿ ನಾಯಕರ ನಡುವೆ ಏನೇ ಸಮಸ್ಯೆಗಳಿದ್ದರು ಕೂತು ಬಗೆಹರಿಸಲು ಸೂಚನೆ ನೀಡಿದೆ. ಹೈಕಮಾಂಡ್ ಸೂಚನೆ ಮೇರೆಗೆ ಇದೀಗ ಪ್ರಹ್ಲಾದ್ ಜೋಶಿ ಕೂಡ ದಾವಣಗೆರೆಯ ಸಮಸ್ಯೆಗೆ ಮದ್ದು ಅರೆಯಲು ಸಿದ್ದವಾಗಿದ್ದಾರೆ. ಜೋಶಿ ನೇತೃತ್ವದಲ್ಲಿ ಸಮಸ್ಯೆಗಳು ಬಗೆಹರಿಯಬಹುದಾ ಎಂಬುದನ್ನ ನಾಳೆವರೆಗೂ ಕಾದು ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment