Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಆಸ್ಪತ್ರೆಗಳು ಮತ್ತು ಕಂಪನಿಗಳ ವಿರುದ್ದ ತನಿಖೆ ನಡೆಸುವಂತೆ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, : ಆಯೋಗ ಹಾಗೂ ಸೆಸ್ ಪ್ರಾಧಿಕಾರ ರಚನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಕಾರ್ಮಿಕ ಇಲಾಖೆ ಎದುರು 12 ದಿನಗಳಿಂದಲೂ ಧರಣಿ ನಡೆಸುತ್ತಿರುವ ನೊಂದಾಯಿತ ಕಟ್ಟಡ ಕಾರ್ಮಿಕರು ಟೆಂಡರ್ ಪಡೆದ ಖಾಸಗಿ ಆಸ್ಪತ್ರೆಗಳು ಮತ್ತು ಖಾಸಗಿ ಕಂಪನಿಗಳ ವಿರುದ್ದ ತನಿಖೆ ನಡೆಸುವಂತೆ ಕಾರ್ಮಿಕ ನಿರೀಕ್ಷಕರ ಮೂಲಕ ಜಾರಿ ನಿರ್ದೇಶನಾಲಯದ ನಿರ್ದೇಶಕರಿಗೆ ಶನಿವಾರ ಮನವಿ ಸಲ್ಲಿಸಿದರು.

ವಾಲ್ಮೀಕಿ ಅಭಿವೃದ್ದಿ ಮಂಡಳಿಯಲ್ಲಿ ನಡೆದಿರುವ ಅಕ್ರಮವನ್ನು ತನಿಖೆ ನಡೆಸಿದ ರೀತಿಯಲ್ಲಿಯೇ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಟೆಂಡರ್ ಪಡೆದಿರುವುದನ್ನು  ತನಿಖೆ ನಡೆಸಬೇಕು. ಹೆಲ್ತ್ ಕೇರ್ ಚೆಕ್‍ಪ್ ಹೆಸರಿನಲ್ಲಿ ಇಪ್ಪತ್ತೈದು ಕೋಟಿ 77 ಲಕ್ಷದ ಅರವತ್ತು ಸಾವಿರ ರೂ. ಖರ್ಚು ಮಾಡಿರುವುದರ ಹಿಂದೆ ಅಕ್ರಮವೆಸಗಲಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿರುವ ಸೆಸ್ ಹಣ ನಿಜವಾದ ನೊಂದಾಯಿತ ಕಟ್ಟಡ ಕಾರ್ಮಿಕರ ಕಷ್ಟಕ್ಕೆ ಬಳಕೆಯಾಗುತ್ತಿಲ್ಲ ಎಂದು ಧರಣಿನಿರತರು ದೂರಿದರು.
ಅಂಬೇಡ್ಕ್‍ರ್ ಸೇವಾ ಕೇಂದ್ರದ ಮೂಲಕ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿಗಳನ್ನು ನೀಡುವ ಜವಾಬ್ದಾರಿಯನ್ನು ಖಾಸಗಿಯವರಿಗೆ ವಹಿಸಿರುವುದನ್ನು ಹಿಂದಕ್ಕೆ ಪಡೆಯುವಂತೆ ಧರಣಿನಿರತರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಜೆ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವೈ.ಕುಮಾರ್,
ಪ್ರಸನ್ನ, ಕೆ.ಗೌಸ್‍ಪೀರ್, ರಾಜಣ್ಣ, ಎಂ.ಆರ್.ನರಸಿಂಹಮೂರ್ತಿ, ಎಂ.ತಿಮ್ಮಯ್ಯ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...