Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಘವೇಂದ್ರ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಸ್ಥನ್ಯಪಾನ ಸಪ್ತಾಹ

---Advertisement---

ರಾಘವೇಂದ್ರ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಸ್ಥನ್ಯಪಾನ ಸಪ್ತಾಹ

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 07 : ಕೋಟೆ ರಸ್ತೆಯಲ್ಲಿರುವ ರಾಘವೇಂದ್ರ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಸ್ಥನ್ಯಪಾನ ಸಪ್ತಾಹವನ್ನು ಗುರುವಾರ ಆಚರಿಸಲಾಯಿತು.

ರಾಘವೇಂದ್ರ ವಿದ್ಯಾಸಂಸ್ಥೆ ಕಾರ್ಯದರ್ಶಿ ಹೆಚ್.ಶ್ರೀನಿವಾಸ್‍ರವರು ವಿಶ್ವ ಸ್ಥನ್ಯಪಾನ ಸಪ್ತಾಹ ಉದ್ಗಾಟಿಸಿ ಮಾತನಾಡುತ್ತ ಕನಿಷ್ಟ ಎರಡು ವರ್ಷಗಳ ಕಾಲ ತಾಯಿ ಮಗುವಿಗೆ ಎದೆಹಾಲು ಕುಡಿಸಬೇಕು. ಇದರಿಂದ ಮಗುವಿನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಎದೆಹಾಲಿನಲ್ಲಿ ಪೌಷ್ಠಿಕಾಂಶವಿರುವ ಕಾರಣ ಯಾವುದೇ ಕಾರಣಕ್ಕೂ ತಾಯಂದಿರು ಮಕ್ಕಳಿಗೆ ಎದೆ ಹಾಲು ಉಣಿಸುವುದನ್ನು ನಿಲ್ಲಿಸಬಾರದೆಂದು ಹೇಳಿದರು.

ಸರ್ಕಾರಿ ನರ್ಸಿಂಗ್ ಶಾಲೆಯ ಪ್ರಾಂಶುಪಾಲರಾದ ರಾಜಯ್ಯ ಮಾತನಾಡಿ ಎದೆಹಾಲು ಉಣಿಸುವುದರಿಂದ ತಾಯಿಯಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ನಿರಂತರ ಸ್ಥನ್ಯಪಾನದಿಂದ ತಾಯಿ ಬೇಗನೆ ಗರ್ಭವತಿಯಾಗುವುದಿಲ್ಲ. ಸೌಂದರ್ಯವೂ ಹಾಳಾಗುವುದಿಲ್ಲ. ಮಗು ಜನಿಸಿದ ಅರ್ಧ ಗಂಟೆಯೊಳಗೆ ತಾಯಿ ಎದೆ ಹಾಲು ಉಣಿಸಬೇಕೆಂದು ತಿಳಿಸಿದರು.

ರಾಘವೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಜಯಲಕ್ಷ್ಮಿ ಮಾತನಾಡುತ್ತ ಆರು ತಿಂಗಳುಗಳ ಕಾಲ ಮಗುವಿಗೆ ತಾಯಿ ಎದೆಹಾಲನ್ನು ಬಿಟ್ಟು ಬೇರೆ ಏನನ್ನು ಕೊಡಬಾರದು. ನಂತರ ಹಾಲಿನ ಜೊತೆ ಪೂರಕ ಆಹಾರವನ್ನು ಮಗುವಿಗೆ ನೀಡುವುದು ಒಳ್ಳೆಯದು. ಎದೆಹಾಲು ಮಗುವಿಗೆ ಜೀವರಕ್ಷಕ ಲಸಿಕೆಯಿದ್ದಂತೆ ಎಂದು ಎದೆಹಾಲಿನ ಮಹತ್ವ ತಿಳಿಸಿದರು.
ಮೋನಿಕಾ, ಪ್ರೇಮ, ಗಾಯಿತ್ರಮ್ಮ, ಉಮ್ರಾಜ್, ಉಪನ್ಯಾಸಕರು ಸ್ತನ್ಯಪಾನ ಸಪ್ತಾಹದಲ್ಲಿ ಭಾಗವಹಿಸಿದ್ದರು.
ನರ್ಸಿಂಗ್ ವಿದ್ಯಾರ್ಥಿಗಳು ಸ್ತನ್ಯಪಾನ ಮಹತ್ವದ ಕುರಿತು ಕಿರುನಾಟಕ ಪ್ರದರ್ಶಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)

Leave a Comment