ಸುದ್ದಿಒನ್ : ವಿಶ್ವಕಪ್-2023 ರಲ್ಲಿ ಸೆಮಿಫೈನಲ್ ಪಂದ್ಯಗಳನ್ನು ಅಂತಿಮಗೊಳಿಸಲಾಗಿದೆ. ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಈ ಮೆಗಾ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಅರ್ಹತೆ ಪಡೆದಿವೆ.
ಈ ಮೆಗಾ ಟೂರ್ನಮೆಂಟ್‌ನಿಂದ ಪಾಕಿಸ್ತಾನ ನಿರ್ಗಮಿಸುವುದರೊಂದಿಗೆ, ನ್ಯೂಜಿಲೆಂಡ್ ನಾಲ್ಕನೇ ತಂಡವಾಗಿ ಸೆಮಿಸ್‌ಗೆ ಅರ್ಹತೆ ಪಡೆದಿದೆ.
ನವೆಂಬರ್ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತವನ್ನು ನ್ಯೂಜಿಲೆಂಡ್ ಎದುರಿಸಲಿದೆ.

ನವೆಂಬರ್ 16 ರಂದು ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಮುಖಾಮುಖಿಯಾಗಲಿವೆ.
ಕಳೆದ 2019 ರ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟೀಂ ಇಂಡಿಯಾ 18 ರನ್‌ಗಳಿಂದ ಸೋಲು ಕಂಡಿತ್ತು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











