ಬಳ್ಳಾರಿ : ವಿಶ್ವಸಂಸ್ಥೆಯ ನಿರ್ದೇಶನದಂತೆ ಪ್ರತಿ ವರ್ಷ ಡಿಸೆಂಬರ್ 3 ರಂದು ಆಚರಿಸಲಾಗುವ ‘ವಿಶ್ವ ವಿಕಲಚೇತನರ ದಿನಾಚರಣೆ’ ಅಂಗವಾಗಿ, ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ನೀಡಲಾಗುವ 2026ನೇ ಸಾಲಿನ ರಾಜ್ಯ ಪ್ರಶಸ್ತಿಗಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ವ್ಯಕ್ತಿಗಳು, ಸೇವಾ ಸಂಸ್ಥೆಗಳು ಹಾಗೂ ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಪೂರಕ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ (ಎರಡು ಪ್ರತಿಗಳು) ನವೆಂಬರ್ 9ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಅರ್ಜಿಯ ನಿಗದಿತ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಾದ www.welfareofdisabled.kar.nic.in ಅಥವಾ www.dwdsc.kar.nic.in ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು.
ಅಗತ್ಯ ದಾಖಲೆಗಳು
ಅರ್ಜಿದಾರರು ಜಿಲ್ಲಾ, ರಾಜ್ಯ, ರಾಷ್ಟç ಹಾಗೂ ಅಂತಾರಾಷ್ಟಿçÃಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಪ್ರಮಾಣಪತ್ರಗಳ ಕ್ರಮಸಂಖ್ಯೆ ಸಹಿತ ವಿವರಗಳು ಹಾಗೂ ವಿಕಲಚೇತನರ ಗುರುತಿನ ಚೀಟಿ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಜೊತೆಗೆ ಕ್ರೋಢೀಕೃತ ಹಾರ್ಡ್ ಮತ್ತು ಸಾಫ್ಟ್ ಪ್ರತಿಗಳನ್ನು ಒದಗಿಸಬೇಕಿರುತ್ತದೆ.
ವಿಶೇಷ ಸೂಚನೆ
2025-26ನೇ ಸಾಲಿನಲ್ಲಿ ಈಗಾಗಲೇ ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಂದ ಶಿಫಾರಸುಗೊಂಡು ಕೇಂದ್ರ ಕಚೇರಿಯಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ಪ್ರಸಕ್ತ ಸಾಲಿಗೆ (2026-27) ಪರಿಗಣಿಸಲಾಗುತ್ತದೆ. ಹಾಗಾಗಿ ಅಂತಹ ಅರ್ಜಿದಾರರು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08392-267886 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲ ಅಂಗವಿಕಲರ ಕಲ್ಯಾಣಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












