Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್. 05 : ನಗರದ ಪ್ರತಿಷ್ಠಿತ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ“ವಿಶ್ವ ಪರಿಸರ ದಿನಾಚರಣೆಯನ್ನು” ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಎಸ್. ಎಂ. ಪೃಥ್ವೀಶ ಮುಖ್ಯೋಪಾಧ್ಯಾಯರಾದ ಎನ್ ಜಿ ತಿಪ್ಪೇಸ್ವಾಮಿ, ಹಾಗೂ ಪ್ರಾಂಶುಪಾಲರಾದ ಬಸವರಾಜಯ್ಯ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಗಿಡಕ್ಕೆ ನೀರು ಎರೆಯುವ ಮೂಲಕ ನೆರವೇರಿಸಿದರು.

ಪರಿಸರ ಸಂರಕ್ಷಣೆಯ ಮಹತ್ವದ ಅರಿವನ್ನು ಮೂಡಿಸಲು ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಶಾಲೆಯ ವ್ಯವಸ್ಥಾಪಕ ನಿರ್ದೇಶಕರಾದ ಪೃಥ್ವೀಶ ಎಸ್.ಎಂ. ಅವರು ಮಾತನಾಡುತ್ತಾ 2025ರ ವಿಶ್ವ ಪರಿಸರ ದಿನದ ವಿಷಯದ ಕುರಿತು ಇಂದಿನ ಈ ಆಚರಣೆ ಕೇವಲ ಈ ದಿನಕ್ಕಷ್ಟೇ ಮೀಸಲಾಗದೇ ಪ್ರತಿ ದಿನ ಪರಿಸರದ ಬಗ್ಗೆ ಕಾಳಜಿಯನ್ನು ತೋರಿಸಬೇಕು. ಮುಖ್ಯವಾಗಿ ಪ್ಲಾಸ್ಟಿಕ್ ಚೀಲ ಬಳಕೆಯನ್ನು ಕಡಿಮೆಗೊಳಿಸಿ ಸಾಧ್ಯವಾದಷ್ಟು ಮನೆಯಲ್ಲಿ ಸಿದ್ಧಪಡಿಸಿದ ಬಟ್ಟೆಯ ಕೈ ಚೀಲಗಳನ್ನು ಬಳಸಿರಿ ಎಂದರು. ಜೊತೆಗೆ ಮಕ್ಕಳೇ ಖುದ್ದಾಗಿ ನಿಮ್ಮ ಮನೆಗಳ ತ್ಯಾಜ್ಯವನ್ನು ಹಸಿ ಕಸ ಹಾಗೂ ಒಣಕಸವನ್ನಾಗಿ ವಿಂಗಡಿಸಿ, ವಿಲೇವಾರಿ ಮಾಡಲು ನಿಮ್ಮ ಪೋಷಕರಿಗೆ ನೆರವಾಗಬೇಕು ಎಂದು ಪ್ರೇರಣದಾಯಕ ನುಡಿಗಳನ್ನಾಡಿದರು.

10ನೇ ತಗರತಿ ವಿದ್ಯಾರ್ಥಿ ಶಿಫಾ ಸ್ವಾಗತಿಸಿದರು. 10ನೇ ತಗರತಿಯ ಆಯೇಷಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. 9ನೆ ತರಗತಿ ಲೇಖನ ಎಲ್ಲರಿಗೂ ವಂದಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ/ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment