Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಶ್ವ ವಸತಿ ರಹಿತರ ದಿನಾಚರಣೆ : ಉಚಿತ ಆರೋಗ್ಯ ತಪಾಸಣಾ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 11 : ವಸತಿ ರಹಿತರು, ನಿರಾಶ್ರಿತರು ಆಹಾರವಿಲ್ಲದೆ ನರಳಬಾರದೆಂದು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ವಸತಿ ರಹಿತರು ಪ್ರಯೋಜನ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರಾದ ಲಕ್ಷ್ಮಿ ತಿಳಿಸಿದರು.

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ನಗರಸಭೆ, ಗಾಡ್ಸ್ ಸಂಸ್ಥೆ ವತಿಯಿಂದ ಮುನ್ಸಿಪಲ್ ಕಾಂಪ್ಲೆಕ್ಸ್‍ನಲ್ಲಿರುವ ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ವಿಶ್ವ ವಸತಿ ರಹಿತರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಗಾಟಿಸಿ ಮಾತನಾಡಿದರು.

ನಗರ ವಸತಿ ರಹಿತರ ಆಶ್ರಯ ಕೇಂದ್ರಕ್ಕೆ ಬರುವವರಿಗೆ ಗಾಡ್ಸ್ ಸಂಸ್ಥೆ ಆಶ್ರಯ ನೀಡುತ್ತ ಯಾವುದೇ ತೊಂದರೆಯಿಲ್ಲದೆ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದೆ. ಸರ್ಕಾರದ ಜೊತೆ ಎನ್.ಜಿ.ಓ. ವಿವಿಧ ಸಂಘ ಸಂಸ್ಥೆಗಳು ಸಹಾಯ ಹಸ್ತ ಚಾಚಬೇಕು. ಹಿರಿಯರನ್ನು ಕೆಲವು ಮನೆಗಳಲ್ಲಿ ಸರಿಯಾಗಿ ಜೋಪಾನ ಮಾಡದ ಕಾರಣ ನಿರಾಶ್ರಿತರು ಇಂತಹ ಕೇಂದ್ರಗಳಿಗೆ ಬರುವುದು ಸಹಜ. ಇನ್ನು ಹಲವರು ಕೆಲಸದ ನಿಮಿತ್ತ ನಗರ ಪ್ರದೇಶಗಳಿಗೆ ಬಂದಾಗ ರಾತ್ರಿ ವೇಳೆ ತಂಗಲು ಜಾಗವಿಲ್ಲದಂತಾಗಿ ಇಲ್ಲಿಗೆ ಬರುತ್ತಾರೆ. ಸರ್ಕಾರ ಎಲ್ಲಾ ರೀತಿಯ ಅನುಕೂಲಗಳನ್ನು ಕಲ್ಪಿಸಿದೆ. ವಸತಿ ರಹಿತರಿಗೆ ಅದು ಉಪಯೋಗವಾಗಬೇಕೆಂದು ಹೇಳಿದರು.

ಕೌಶಲ್ಯಾಭಿವೃದ್ದಿ ಅಧಿಕಾರಿ ವೇಮಣ್ಣ ಮಾತನಾಡಿ ವಸತಿ ರಹಿತರಿಗೆ ಆಶ್ರಯ ಕೇಂದ್ರದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಗಾಡ್ಸ್ ಸಂಸ್ಥೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಬಸ್‍ನಿಲ್ದಾಣ, ಆಸ್ಪತ್ರೆ ಇನ್ನು ಮುಂತಾದ ಕಡೆ ನಿರಾಶ್ರಿತರನ್ನು ಪತ್ತೆ ಹಚ್ಚುವುದಕ್ಕಾಗಿ ರ್ಯಾಪಿಡ್ ಸರ್ವೆ ನಡೆಸಲಾಗುತ್ತಿದೆ ಎಂದರು.
ಗಾಡ್ಸ್ ಸಂಸ್ಥೆ ಕಾರ್ಯದರ್ಶಿ ಸೂರ್ಯನಾರಾಯಣ, ಕೆಂಚಪ್ಪ, ಉಮೇಶ್, ಚಿದಾನಂದಮೂರ್ತಿ, ಡಾ.ಪವಿತ್ರ, ನ್ಯಾಯವಾದಿ ಮಾದವಿಲತ, ಕವಿತ, ಹತೀಕ್, ನಗರಸಭೆ ಪರಿಸರ ಇಂಜಿನಿಯರ್ ಜಾಫರ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು. ಇದೇ ಸಂದರ್ಭದಲ್ಲಿ ಸಸಿ ನೆಡಲಾಯಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now