Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರದ್ದಾ ಭಕ್ತಿಯಿಂದ ನಡೆದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 26 : ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಭುಧವಾರದಂದು ಸ್ವಾಮಿಯ ಕೆಂಡಾರ್ಚನೆ ಕಾರ್ಯಕ್ರಮ ನಡೆಯಿತು.

ಇಂದು ಬೆಳಿಗ್ಗೆ ಸ್ವಾಮಿಗೆ ಹೂವಿನ ಉತ್ಸವ ನಡೆದಿದ್ದು, ನಂತರ ಪಲ್ಲಕ್ಕಿಯಲ್ಲಿ ಸ್ವಾಮಿಯನ್ನು ಕುಳ್ಳರಿಸಿ ದೇವಾಲಯದ ಸುತ್ತಾ-ಮುತ್ತಾ ಪ್ರದೇಶದಲ್ಲಿ ಮೆರವಣಿಗೆಯನ್ನು ನಡೆಸಲಾಯಿತು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಕಂಕಣಧಾರಣೆ, ಆಶ್ವೋತ್ಸವ, ವೃಷಭೋತ್ಸವ ಕಾರ್ಯಕ್ರಮ ನಡೆಯಿತು.
ಕೆಂಡಾರ್ಚನೆ ಸಮಯದಲ್ಲಿ ಕಡೂರಿನಿಂದ ಬಂದಿದ್ದ ಚನ್ನವೀರಪ್ಪ ಮತ್ತು ತಂಡದವರು ಸ್ವಾಮಿಯ ಮುಂದೆ ವೀರಭದ್ರ ಸ್ವಾಮಿಯ ಒಡಪುಗಳನ್ನು ಹೇಳುವುದರ ಮೂಲಕ ಪಲ್ಲಕ್ಕಿಯ ಮೆರವಣಿಗೆಯನ್ನು ನಡೆಸಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಆಗಮಿಸಿದ ಭಕ್ತಾಧಿಗಳು ಮಾವಿನಹಳ್ಳಿ ಬಸವೇಶ್ವರ ಮಹಾರಾಜ್ ಕೀ ಜೈ, ವೀರಭದ್ರÀ ಸ್ವಾಮಿಜೀ ಕೀ ಎಂಬ ಘೋಷಣೆಗಳು ಕೇಳಿ ಬಂದವು. ನೂತನವಾಗಿ ನಿರ್ಮಾಣ ಮಾಡಲಾದ ಸ್ವಾಮಿಯ ದೇವಾಲಯವನ್ನು ವಿವಿಧ ರೀತಿಯ ಹೂಗಳು ಹಾಗೂ ವಿದ್ಯುತ್ ದೀಪಗಳಿಂದ ಆಲಂಕಾರ ಮಾಡಲಾಗಿತ್ತು.

ಸ್ವಾಮಿಯನ್ನು ಕುಳ್ಳರಿಸಿದ ಪಲ್ಲಕ್ಕಿಯನ್ನು ವಿವಿಧ ರೀತಿಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಅದರಲ್ಲಿ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಮೆರವಣಿಗೆಯನ್ನು ನಡೆಸಲಾಯಿತು. ನಂತರ ದೇವಾಲಯದ ಆವರಣದಲ್ಲಿ ನಿರ್ಮಾಣ ಮಾಡಲಾದ ಕೆಂಡದ ಕುಂಡದಲ್ಲಿ ಸ್ವಾಮಿಯ ಪಲ್ಲಕ್ಕಿಯನ್ನು ಹೊತ್ತ ಭಕ್ತಾಧಿಗಳು ಅದರ ಮೇಲೆ ಆಗಮಿಸುವುದರ ಮೂಲಕ ಕೆಂಡಾರ್ಚನೆ ಕಾರ್ಯಕ್ರಮವನ್ನು ನೇರವೇರಿಸ ಲಾಯಿತು. ತದ ನಂತರ ಭಕ್ತಾಧಿಗಳು ಕೆಂಡವನ್ನು ತುಳಿಯುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು ಇದೇ ರೀತಿ ದೇವರನ್ನು ಹೊತ್ತ ಪಲ್ಲಕ್ಕಿಯೂ ಕೆಂಡದ ಮೇಲೆ ಮೂರು ಸುತ್ತು ಹಾಕಲಾಯಿತು. ರಥೋತ್ಸವ ಸಮಯದಲ್ಲಿ ಆಗಮಿಸುವ ಭಕ್ತಾಧಿಗಳಿಗೆ ಶ್ರೀ ಮಾವಿನಹಳ್ಳಿ ಬಸವೇಶ್ವರಸ್ವಾಮಿ ಟ್ರಸ್ಟ್‍ವತಿಯಿಂದ ದಾಸೋಹ ಸೇವೆಯನ್ನು ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಶ್ರೀ ಮಾವಿನಹಳ್ಳಿ ಬಸವೇಶ್ವರಸ್ವಾಮಿ ಟ್ರಸ್ಟ್‍ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ಫೆ. 26 ರಂದು ಸಂಜೆ 4 ಗಂಟೆಗೆ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವದ ನಂತರ 5 ಗಂಟೆಗೆ ಶ್ರೀ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಫೆ.27 ರಂದು ಸಂಜೆ 5 ಕ್ಕೆ ಕಂಕಣ ವಿಸರ್ಜನೆ ಹಾಗೂ ಮಹಾ ಮಹಾಮಂಗಳಾರತಿಯೊಂದಿಗೆ ಸ್ವಾಮಿಯ ರಥೋತ್ಸವದ ಸೇವಾ ಕಾರ್ಯಕ್ರಮ ಮುಕ್ತಾಯವಾಗಲಿದೆ.
ಶ್ರೀ ಸ್ವಾಮಿಯ ದೇವಸ್ಥಾನದ ನೂತನ ಕಟ್ಟಡದ ಕಾರ್ಯ ಪ್ರಗತಿಯಲ್ಲಿದ್ದು, ಭಕ್ತಾದಿಗಳು ನೂತನ ದೇವಸ್ಥಾನದ ನಿರ್ಮಾಣಕ್ಕೆ ಹೆಚ್ಚಿನ ಧನಸಹಾಯ ಮಾಡುವವರು ಹಾಗೂ ವಾಗ್ದಾನ ಮಾಡಿರುವವರು ಜಾತ್ರಾ ಸಮಯದಲ್ಲಿ ಹಣವನ್ನು ಕೊಟ್ಟು ರಸೀದಿಯನ್ನು ಪಡೆದು ಶ್ರೀ ಸ್ವಾಮಿ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ ಮಾಡಿದ್ದಲ್ಲದೆ ಹಿಂದಿನ ವರ್ಷ ರಥೋತ್ಸವ ಸಮಯದಲ್ಲಿ ಭಾವುಟ ಮತ್ತು ಹೂವಿನ ಹಾರಗಳನ್ನು ಹರಾಜಿನಲ್ಲಿ ಪಡೆದವರು ಶ್ರೀ ಸ್ವಾಮಿಯ ರಥೋತ್ಸವದ ದಿವಸ ಹಣ ಕೊಟ್ಟು ರಸೀದಿಯನ್ನು ಪಡೆಯ ಬೇಕೆಂದು ಮನವಿ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now