Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಜಾತಿಗಣತಿ ಸಮೀಕ್ಷೆಯಲ್ಲಿ ಮಾದಿಗ ಜಾತಿ ಎಂದು ಬರೆಸಿ : ಡಿ.ಎನ್.ಮೈಲಾರಪ್ಪ ಮನವಿ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 10 : ಸುಮಾರು 35 ವರ್ಷಗಳ ಅವಿರತ ಹೋರಾಟದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಮಾಡುತ್ತಿರುವ ಹಿನ್ನಲೆಯಲ್ಲಿ ಈಗ ಜಾತಿಯ ಮಾಹಿತಿ ಸಂಗ್ರಹ ನಡೆಯುತ್ತಿರುವುದರಿಂದ ಜನಾಂಗದ ಬಂಧುಗಳು ಮಾದಿಗ ಜಾತಿಯ ಹೆಸರನ್ನು ನಮೂದಿಸುವಂತೆ ನಗರದಲ್ಲಿ ಅಂಬೇಡ್ಕರ್ ನಗರದಲ್ಲಿ ಸೇರಿದ್ದ ಜನಾಂಗದ ಸಭೆಯಲ್ಲಿ ಗ್ಯಾರಂಟಿ ಯೋಜನೆ ಉಪಾಧ್ಯಕ್ಷರು ಹಾಗೂ ಮಾಜಿ ನಗರಸಭಾ ಅಧ್ಯಕ್ಷರಾದ ಡಿ.ಎನ್.ಮೈಲಾರಪ್ಪ ಮನವಿ ಮಾಡಿದರು.

ನಂತರ ಸಭೆಯಲ್ಲಿ ಮಾತನಾಡಿ, ಮಾದಿಗ ಸಮುದಾಯದ ಬಾಂಧವರು ನಿಖರವಾದ ಮಾಹಿತಿ ನೀಡಬೇಕು ನೀವು ನೀಡುವ ಮಾಹಿತಿ ಆಧಾರದ ಮೇಲೆ ಓಳ ಮೀಸಲಾತಿ ಜಾರಿಯಾಗಲಿದೆ, ಸಮುದಾಯ ಕುಟುಂಬದಲ್ಲಿ ಅನಕ್ಷರಸ್ಥರು ಹೆಚ್ಚಿದ್ದು ಅಂತವರ ಬಳಿಗೆ ಹೋಗಿ ಮಾಹಿತಿ ನೀಡಿ ಮಾದಿಗ ಉಪ ಜಾತಿಯ ಹೆಸರು ನೊಂದಾಯಿಸುವಂತೆ ಜನಾಂಗದ ಮುಖಂಡರು ಶ್ರಮಿಸಬೇಕಾಗಿದೆ.

ಈ ಭಾಗದಲ್ಲಿ ಮಾದಿಗ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಅಂಬೇಡ್ಕರ್ ನಗರದಲ್ಲಿ ಸಮೀಕ್ಷೆಯ ಸಂದರ್ಭದಲ್ಲಿ ಡಿ.ಎನ್.ಮೈಲಾರಪ್ಪ ಹಾಗೂ ಸ್ಥಳೀಯ ಮುಖಂಡರು ಮನೆ ಮನೆಗೆ ತೆರಳಿ ಮಾದಿಗ ಜಾತಿ ಎಂದು ಬರೆಸಲು ಅಲ್ಲಿಯ ಜನತೆಗೆ ನೆರವಾದರು. ಮಾದಿಗರು ಯಾವುದೇ ಕಾರಣಕ್ಕೂ ಆದಿಕರ್ನಾಟಕ ಆದಿದ್ರಾವಿಡ ಎಂದು ನಮೂದಿಸಬಾರದು ಸಮಾಜಿಕ ಶೈಕ್ಷಣಿಕ ಆರ್ಥಿಕ ರಾಜಕೀಯವಾಗಿ ಹಿಂದುಳಿದವರ ಈ ಸಮಾಜ ಜಾತಿಗಣತಿಯಲ್ಲಿ ಮಾದಿಗ ಎಂದು ನಮೂದಿಸದಿದ್ದರೆ ಇಡೀ ಜನಾಂಗ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ತಿಳಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment