ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 11 : ಲೇಖಕಿಯರು ತಮ್ಮ ಭಾವನೆಗಳನ್ನು ಮನಸ್ಸಿನಲ್ಲಿಯೇ ಅಡಗಿಸಿಕೊಳ್ಳದೆ ಬರವಣಿಗೆ ಮೂಲಕ ಹೊರ ಸೂಸಬೇಕೆಂದು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ನಿರ್ಮಲ ಮರಡಿಹಳ್ಳಿ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಲೇಖಕಿಯರ ಸಂಘದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಹೆಣ್ಣು ಮನೆಯಿಂದ ಹೊರ ಬಂದರೆ ಅನೇಕ ಟೀಕೆ ಟಿಪ್ಪಣಿ, ಅಪವಾದಗಳನ್ನು ಎದುರಿಸಬೇಕಾಗುತ್ತದೆ. ಎಲ್ಲವನ್ನು ಮೆಟ್ಟಿ ನಿಂತು ಸಮಾಜದ ಮುಖ್ಯವಾಹಿನಿಗೆ ಬರಬೇಕು. ದೌರ್ಜನ್ಯ, ದಬ್ಬಾಳಿಕೆ, ಹೆಣ್ಣಿನ ಮೇಲೆ ನಡೆಯುವ ಶೋಷಣೆ, ಅತ್ಯಾಚಾರ ಇವುಗಳ ವಿರುದ್ದ ಧ್ವನಿ ಎತ್ತುವ ಶಕ್ತಿಯನ್ನು ಮೈಗೂಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕುಟುಂಬ ನಿರ್ವಹಣೆ ಜೊತೆಗೆ ಸ್ತ್ರೀ ಬರವಣಿಗೆಯಲ್ಲಿಯೂ ತೊಡಗಿಕೊಂಡಾಗ ತನ್ನಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಲೇಖಕಿಯರ ಸಂಘದ ಉಪಾಧ್ಯಕ್ಷೆ ಶಬ್ರಿನಾ ಮಹಮದ್ ಆಲಿ, ಕಾರ್ಯದರ್ಶಿ ದೀಪಿಕಾಬಾಬು, ಉಪ ಕಾರ್ಯದರ್ಶಿಯಾಗಿ ಚಾಂದಿನಿಖಾಲೀದ್, ಖಜಾಂಚಿ ಮೀರಾನಾಡಿಗ್, ವಿಜಯಲಕ್ಷ್ಮಿ, ದ್ಯಾಮಕ್ಕ, ವಿಜಯಕಲಾ, ಸೌಮ್ಯಬಾನಾಡಿ, ಮಧುಸಜ್ಜನ್, ಶೃತಿ ಎಸ್.ಹೆಗಡೆ, ಶಾಂತ ಜಿ, ಶಿಲ್ಪ, ಭವ್ಯರಾಮಚಂದ್ರ, ಶೈಲಜಾ ಇವರುಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












