ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಎಕ್ಸ್ – ರೇ, ಲ್ಯಾಬ್ ಟೆಸ್ಟ್‌ ಗಳು ಉಚಿತ

1 Min Read

ಚಿತ್ರದುರ್ಗ. ಆಗಸ್ಟ್ : 20: ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಎಕ್ಸ್ – ರೇ ಮತ್ತು ಲ್ಯಾಬ್ ಟೆಸ್ಟ್‌ಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ

ಸಂಪೂರ್ಣವಾಗಿ ಉಚಿತವಾಗಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ತಿಳಿಸಿದ್ದಾರೆ.

ಇದೇ ತಿಂಗಳ ಸ್ವಾತಂತ್ರ್ಯ ದಿನಾಚರಣೆಯ ದಿನವಾದ  ಆಗಸ್ಟ್ 15 ರಿಂದಲೇ ಈ ಉಚಿತ ಸೇವೆಯನ್ನು ಪ್ರಾರಂಭಿಸಲಾಗಿದೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಲಭ್ಯವಿರುವಂತಹ ಎಕ್ಸ್-ರೇ ಸೇವೆ ಜೊತೆಗೆ ವಿವಿಧ ಬಗೆಯ ಪ್ರಯೋಗಾಲಯದ ಪರೀಕ್ಷೆಗಳನ್ನು ಕೂಡ ಉಚಿತವಾಗಿ ಮಾಡಲಾಗುತ್ತಿದೆ.

ಸಾರ್ವಜನಿಕರು, ಆಸ್ಪತ್ರೆಗೆ ಬರುವಾಗ ತಪ್ಪದೇ ತಮ್ಮ ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಕಾರ್ಡ್ ಅನ್ನು ತಂದು ಈ ಉಚಿತ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *