Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಆಯೋಗ ಹಾಗೂ ಸೆಸ್ ವಸೂಲಿ ಪ್ರಾಧಿಕಾರ ರಚಿನೆಯಾಗಲಿ : ವೈ.ಕುಮಾರ್ ಒತ್ತಾಯ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 14 : ನೊಂದಾಯಿತ ಕಟ್ಟಡ ಕಾರ್ಮಿಕರ ಸಾಕಷ್ಟು ಸಮಸ್ಯೆಗಳ ನಿವಾರಣೆಗಾಗಿ ಆಯೋಗ ಹಾಗೂ ಸೆಸ್ ವಸೂಲಿ ಪ್ರಾಧಿಕಾರ ರಚಿನೆಯಾಗಬೇಕು. ಇದಕ್ಕೆ ಸಂಬಂಧಿಸಿದಂತೆ ಕಾರ್ಮಿಕ ಸಚಿವರು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳ ಕಚೇರಿ ಎದುರು ಕಳೆದ ಆರು ದಿನಗಳಿಂದಲೂ ಧರಣಿ ನಡೆಸುತ್ತಿರುವ ವೈ.ಕುಮಾರ್ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ಲಕ್ಷ 56 ಸಾವಿರದ 188 ನೊಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ರಾಜ್ಯದಲ್ಲಿ 42 ಲಕ್ಷ ಕಟ್ಟಡ ಕಾರ್ಮಿಕರಿದ್ದರೂ ಸರ್ಕಾರ ಕಾರ್ಮಿರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ದಿನಾಂಕ : 18-1-2007 ರ ಪ್ರಕಾರ ಅತಿ ದೊಡ್ಡ ದೊಡ್ಡ ಕಾಮಗಾರಿಗಳ ಪರಿವೀಕ್ಷಣೆ ಮತ್ತು ಸುಂಕ ಸಂಗ್ರಹಣಾಧಿಕಾರಿಯೆಂದು ಕಾರ್ಮಿಕ ಆಯುಕ್ತರು, ಉಪ ಕಾರ್ಮಿಕ ಆಯುಕ್ತರು, ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿದ್ದರೂ ಇದುವರೆವಿಗೂ ಯಾರು ತಮ್ಮ ಅಧಿಕಾರವನ್ನು ಚಲಾಯಿಸಿ ಕಟ್ಟಡ ಕಾರ್ಮಿಕರ ಕಷ್ಟಗಳನ್ನು ಆಲಿಸುತ್ತಿಲ್ಲ ಎಂದು ಆಪಾದಿಸಿದರು.
ಗುತ್ತಿಗೆದಾರರು, ನಿಯೋಜಕರು, ಮನೆ ಮಾಲಿಕರು ಕಾಮಗಾರಿ ಆರಂಭೊಂಡ ದಿನದಿಂದ ಮುಕ್ತಾಯಗೊಂಡರು ಯಾರು ಸೆಸ್ ಪಾವತಿಸಿಲ್ಲವೋ ಅಂತಹವರಿಗೆ ಶೇ. 2 ರಂತೆ ಬಡ್ಡಿ ವಿಧಿಸಬೇಕೆಂಬ ಕಾನೂನಿದ್ದರೂ ಪ್ರಯೋಜನವಿಲ್ಲದಂತಾಗಿದೆ. ಇದರಿಂದ ಸೆಸ್‍ನಿಂದ ತಪ್ಪಿಸಿಕೊಳ್ಳುತ್ತಿರುವವರು ನಿಜವಾದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಅನ್ಯಾಯವೆಸಗುತ್ತಿದ್ದಾರೆ. ಪಿಂಚಣಿ ಸಿಗುತ್ತಿಲ್ಲ. ಹಲವಾರು ಸೌಲಭ್ಯಗಳು ಕೈತಪ್ಪಿ ಹೋಗುತ್ತಿವೆ ಎಂದು ವೈ.ಕುಮಾರ್ ನೊಂದಾಯಿತ ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಹೇಳಿಕೊಂಡರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಜೆ.ಮಂಜುನಾಥ್, ಡಿ.ಈಶ್ವರಪ್ಪ, ಆರ್.ಗೌಸ್‍ಪೀರ್, ನರಸಿಂಹಮೂರ್ತಿ
ಗೌಸ್‍ಖಾನ್, ರಫೀಕ್, ತಿಮ್ಮಯ್ಯ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...