Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರಿಕಣಿವೆ ಡ್ಯಾಂಗೆ ಬಾಗಿನ ಅರ್ಪಿಸಿದ ಮೈಸೂರು ಸಂಸ್ಥಾನದ ಯದುವೀರ್ ಶ್ರೀಕೃಷ್ಣದತ್ತ ಒಡೆಯರ್

---Advertisement---

ಸುದ್ದಿಒನ್, ಹಿರಿಯೂರು, ಜನವರಿ. 21 : ತಾಲ್ಲೂಕಿನ ವಾಣಿ ವಿಲಾಸ ಜಲಾಶಯ 130 ಅಡಿ ಭರ್ತಿಯಾಗಿ, 3ನೇ ಬಾರಿಗೆ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಮಹಾರಾಜರು ಹಾಗೂ ಸಂಸತ್ ಸದಸ್ಯರಾದ ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಅವರು ವಿವಿ ಸಾಗರ ಡ್ಯಾಂಗೆ ಬಾಗಿನ ಅರ್ಪಿಸಿದರು.

ಇದಕ್ಕೂ ಮುನ್ನ ಹಿರಿಯೂರು ನಗರಕ್ಕೆ ಆಗಮಿಸಿದ ಮಹಾರಾಜರನ್ನು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಪ್ರವಾಸಿ ಮಂದಿರದಲ್ಲಿ ಉಪಹಾರ ಮುಗಿಸಿ, ಆಸ್ಪತ್ರೆ ಮುಂಭಾಗದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮೈಸೂರಿನ ರಾಜಮಾತೆ ಕೆಂಪನಂಜಮ್ಮಣ್ಣಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ನಂತರ ವಾಣಿ ವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಬಳಿಕ ಮಾತನಾಡಿದ ಅವರು ವಾಣಿ ವಿಲಾಸ ಜಲಾಶಯ 3ನೇ ಬಾರಿಗೆ ಕೋಡಿ ಬಿದ್ದಿರುವುದು ಸಂತಸ ತಂದಿದೆ. ಈ ಜಲಾಶಯಕ್ಕೆ ನಾನು ಎರಡನೇ ಬಾರಿಗೆ ಬಾಗಿನ ಅರ್ಪಿಸಿರುವುದು ನನಗೆ ಸಂತಸ ತಂದಿದೆ. ಈ ಜಿಲ್ಲೆಯ ಜನರಿಗೆ ವರ್ಷ ಪೂರ್ತಿ ನೀರು ಲಭ್ಯಕ್ಕೆ ನಿರ್ಮಾಣ ಮಾಡಲಾಗಿದೆ. ಈ ವರೆಗೆ ಜಲಾಶಯ ಸಮಾಜಕ್ಕೆ ಲಾಭ ಪಡೆಯಲು ಸಾಧ್ಯವಾಗುತ್ತಿದೆ. ಇದಕ್ಕೆ ನಮಗೆ ಮೊದಲಿನಿಂದಲೂ ಸಂಬಂಧ ಇರುವುದರಿಂದ ಬಾಗಿನ ಅರ್ಪಣೆ ಮಾಡಲಾಯಿತು. ವರುಣ, ಗಂಗೆ ತಾಯಿಗೆ ಎಷ್ಟು ಕೃತಜ್ಞತೆ ಕೊಟ್ಟರೂ ಸಾಲದು ಎಂದು ಜಲಾಶಯ ತುಂಬಿರುವುದನ್ನು ಬಣ್ಣಿಸಿದರು. ಬಾಗಿನ ಅರ್ಪಿಸುವ ಮೂಲಕ ನಮ್ಮ ವಂದನೆಗಳನ್ನು ಅರ್ಪಿಸುತ್ತೇವೆ ಎಂದು ಹೇಳಿದರು.

ಅಧಿಕಾರದಲ್ಲಿದ್ದವರು ಬಾಗಿನ : ಜನವರಿ 23ರಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿವಿ ಸಾಗರ ಡ್ಯಾಂಗೆ ಬಾಗಿನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನ ಮಾಡಲಾಗಿಲ್ಲ ಎಂಬ ವದಂತಿಯ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಯಾರು ಅಧಿಕಾರದಲ್ಲಿ ಇರುತ್ತಾರೆ ಅವರು ಡ್ಯಾಂಗೆ ಬಾಗಿನ ಅರ್ಪಿಸುತ್ತಾರೆ. ಅಧಿಕಾರ ಇದ್ದಾಗ ಪ್ರಕ್ರಿಯೆ ಏನಿದೆ ಅದನ್ನು ಅನುಸರಿಸುತ್ತಾರೆ.

ನಮಗೆ ಹಿಂದೆಯೂ ವಿಶೇಷವಾಗಿ ಆಹ್ವಾನಿಸಿರಲಿಲ್ಲ. ಸ್ಥಳೀಯರು ನಮ್ಮನ್ನು ಆಹ್ವಾನ ಕೊಡುತ್ತಿದ್ದರು. ಇವತ್ತು ಹಾಗೆ ನಡೆದಿದೆ. ಇದರಲ್ಲಿ ರಾಜಕೀಯ ಮಾಡುವ ಯಾವ ಅವಶ್ಯಕತೆ ಇರುವುದಿಲ್ಲ. ಅಧಿಕಾರದಲ್ಲಿ ಇರುವವರೇ ಬಾಗಿನ ಅರ್ಪಿಸುತ್ತಾರೆ.ಸಮಸ್ತ ಕನ್ನಡಿಗರು ಅವರಿಗೆ ಅಧಿಕಾರ ನೀಡಿ ಸ್ಥಾನಕ್ಕೆ ಕೂರಿಸಿದ್ದಾರೆ. ದೇವರ ಕೃತಜ್ಞತೆ ಸಲ್ಲಿಸುವ ನಮ್ಮ ಕಡೆಯಿಂದ ರಾಜಕೀಯ ಆಗುವುದಿಲ್ಲ ಎಂದು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment