Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

---Advertisement---

ಬೆಂಗಳೂರು: ಇಂಡಿ ಕ್ಷೇತ್ರದ ಹಿರಿಯ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಇಂಡಿ ಹಾಗೂ ನೂತನವಾಗಿ ರಚನೆಯಾದ ಚಡಚಣ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದ ಹಿನ್ನೆಲೆ ಅವರು ಈ ತೀರ್ಮಾನಕ್ಕೆ ಬಂದಿದ್ದಾರೆ.ಈ ಹಿಂದೆ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ವಂಚಿತರಾಗಿದ್ದ ಯಶವಂತರಾಯಗೌಡ ಪಾಟೀಲ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿ ರಾಜೀನಾಮೆಗೆ ಮುಂದಾಗಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ತಕ್ಷಣ ಮಧ್ಯಪ್ರವೇಶಿಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

ಆದರೆ, ಇತ್ತೀಚಿನ ಬೆಳವಣಿಗೆಗಳಲ್ಲಿ ಸರ್ಕಾರ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದ ಹಿನ್ನೆಲೆಯಲ್ಲಿ ಯಶವಂತರಾಯಗೌಡ ಪಾಟೀಲ್, ಇಂದು ಅಂತಿಮವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.

Join WhatsApp

Join Now

Join Telegram

Join Now