ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿ ಕದನ ಬೂದಿ ಮುಚ್ವಿದ ಕೆಂಡದಂತೆ ಇದೆ. ಈ ಅವಧಿಯಲ್ಲಿಯೇ ಸಿಎಂ ಆಗ್ಬೇಕು ಎಂಬ ಪ್ರಯತ್ನದಲ್ಲಿದ್ದಾರೆ. ಹೀಗಿರುವಾಗ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಯತೀಂದ್ರ ಅವರು, ನಮ್ಮ ತಂದೆಯೇ ಐದು ವರ್ಷ ಸಿಎಂ ಆಗಿ ಇರ್ತಾರೆ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ. ಪೂರ್ಣಾವಧಿ ಸಿಎಂ ಸ್ಥಾನಕ್ಕೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂಬ ಮಾತನ್ನ ಹೇಳಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಅವರೇ ಕಾಂಗ್ರೆಸ್ ಹೈಕಮಾಂಡ್ ಅಲ್ವಾ ಅಂತ ವ್ಯಂಗ್ಯ ಮಾಡಿದ್ದಾರೆ. ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಅವರು ಏನು ಹೇಳ್ತಾರೋ ಅದನ್ನು ಗೌರವದಿಂದ ಸ್ವೀಕಾರ ಮಾಡೋಣ. ಯತೀಂದ್ರ ಅವರನ್ನೇ ನಮ್ಮ ಹೈಕಮಾಂಡ್ ಅಂತ ಸ್ವೀಕಾರ ಮಾಡೋಣ. ನಾನು ಈ ಬಗ್ಗೆ ಯಾರಿಗೂ ಪ್ರತಿಕ್ರಿಯೆ ಕೊಡುವುದಿಲ್ಲ ಎಂಬ ಮಾತನ್ನ ಹೇಳಿದ್ದಾರೆ.
ಬಸವರಾಜ್ ಗೂ ರಿಯಾಕ್ಟ್ ಮಾಡೋಕೆ ಇಷ್ಟ ಇಲ್ಲ ಯತೀಂದ್ರ ಅವರಿಗೂ ರಿಯಾಕ್ಟ್ ಮಾಡೋದಕ್ಕೆ ಇಷ್ಟ ಇಲ್ಲ. ಏನೇ ಇದ್ದರು ಅದು ಹೈಕಮಾಂಡ್ ನಾಯಕರು ರಿಯಾಕ್ಟ್ ಮಾಡಬೇಕು ಎಂವ ಮಾತನ್ನ ಹೇಳಿ ಮುಂದೆ ಸಾಗಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆಗಬೇಕು ಅಂತ ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಆದರೂ ಆ ಪ್ರಯತ್ನ ಯಾಕೋ ಫಲಿಸುತ್ತಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ದೆಹಲಿಗೂ ಹೋಗಿ ಬಂದಿದ್ದಾರೆ ಆದರೂ ಹೈಕಮಾಂಡ್ ನಾಯಕರ ಭೇಟಿಗೆ ಅವಕಾಶ ಸಿಕ್ಕಿಲ್ಲ. ಈ ನಡುವೆ ಈ ರೀತಿಯಾದಂತ ಚರ್ಚೆಗಳು ಶುರುವಾಗಿವೆ.

