Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಖಂಡನೀಯ : ಕೆ ಅಭಿನಂದನ್

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 27 : ಮೈಸೂರು ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗಿಂತ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಪಡಿಸಿದ್ದಾರೆ ಎಂದು ಸಿಎಂ ಪುತ್ರ ಹಾಗೂ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ. ಅಭಿನಂದನ್ ಖಂಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅಭಿನಂದನ್ ಅವರು ಸಿಎಂ ಮಗ ಎಂಬ ಕಾರಣಕ್ಕೆ ಮನಸಿಗೆ ತೋಚಿದ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು. ಅಧಿಕಾರದಲ್ಲಿ ಇದ್ದೇವೆಂದು ಪ್ರಚಾರದ ಹೇಳಿಕೆಗಳು ನೀಡುವುದು ಸರಿಯಲ್ಲ ಎಂದಿದ್ದಾರೆ.

ಮೈಸೂರು ಮಹಾರಾಜ ಮನೆತನವನ್ನು ಇಡೀ ರಾಜ್ಯವೇ ಮೆಚ್ಚಿಕೊಂಡಿದೆ. ದಕ್ಷಿಣ ಭಾರತದಲ್ಲಿ ಮೈಸೂರಿನ ಮಹಾರಾಜರು 1399 ರಿಂದ 1947ರವಗೆ ಆಡಳಿತ ನಡೆಸಿದ್ದಾರೆ. ಅದರಲ್ಲೂ 1894 ರಿಂದ 1940ರ ವರೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಚಿಕ್ಕ ವಯಸ್ಸಿನಲ್ಲೇ ಆಡಳಿತ ನಡೆಸಿ, ಮಾದರಿಯಾಗಿದ್ದರು. ಅವರ ಆಳ್ವಿಕೆಯಲ್ಲಿ ಮೈಸೂರು ಸಂಸ್ಥಾನವು ಅನೇಕ ಪ್ರಗತಿಗಳನ್ನು ಕಂಡಿತು. ಶಿಕ್ಷಣ, ಕೈಗಾರಿಕೆ, ನೀರಾವರಿ, ಬ್ಯಾಂಕಿಂಗ್, ಸಹಕಾರ, ಕಲೆ, ಸಾಹಿತ್ಯ, ಸಂಸ್ಕೃತಿ, ರಸ್ತೆ, ಮತ್ತು ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲಾಯಿತು. ಅವರ ಆಡಳಿತವನ್ನು “ರಾಜರ್ಷಿ” ಎಂದು ಕರೆಯಲಾಯಿತು, ಇದು ಮಹಾತ್ಮ ಗಾಂಧೀಜಿಯವರಿಂದ ನೀಡಲ್ಪಟ್ಟಿತು, ಅವರ ಆಡಳಿತಾತ್ಮಕ ಸುಧಾರಣೆಗಳು ಮತ್ತು ಸಾಧನೆಗಳಿಗಾಗಿ.

ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತನ್ನ ಮನೆತನದ ಒಡವೆಗಳನ್ನು ಅಡವಿಟ್ಟು ಕೆಆರ್. ಎಸ್ ಅಣೆಕಟ್ಟು ಮತ್ತು ಹಿರಿಯೂರಿನ ವಾಣಿ ವಿಲಾಸ ಜಲಾಶಯವನ್ನು ನಿರ್ಮಾಣ ಮಾಡಿ, ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಆಭರಣಗಳನ್ನು ಅಡವಿಟ್ಟು ರಾಜ್ಯದ ಜನತೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದನ್ನು ಯತೀಂದ್ರ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ತಿಳಿಸಬೇಕು. ಕೂಡಲೇ ಯತೀಂದ್ರ ಸಿದ್ದರಾಮಯ್ಯ ಅವರು ಮೈಸೂರು ಮನೆತನದ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment