Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ಮಾತಿಗೆ ಯತ್ನಾಳ್ ಸಮ್ಮತಿ : ರೆಬೆಲ್ ಸೈಲೆಂಟ್ ಆದ್ಮೇಲೆ ಉಳಿದವರು ಆಗ್ತಾರಾ..?

---Advertisement---

ನವದೆಹಲಿ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮಾತಿಗೆ ಮುಂಚೆ ಯಡಿಯೂರಪ್ಪ ಅಂಡ್ ಸನ್ಸ್ ವಿರುದ್ಧ ಮಾತಿನ ಯುದ್ಧವನ್ನೇ ಸಾರುತ್ತಿದ್ದರು. ಆದರೆ ಈಗ ಕೇಂದ್ರ ಶಿಸ್ತು ಸಮಿತಿ‌ ಮುಂದೆ ಹಾಜರಾದ ಬೆನ್ನಲ್ಲೇ ಯತ್ನಾಳ್ ಉಲ್ಟಾ ಹೊಡೆಯುತ್ತಿದ್ದಾರೆ. ಯಡಿಯೂರಪ್ಪ ಅವರ ಮಾತಿಗೆ ನನ್ನ ಸಮ್ಮತಿ ಇದೆ ಎಂದೇ ಹೇಳಿದ್ದಾರೆ. ಈ ಮೂಲಕ ರೆಬೆಲ್ ಆಗಿದ್ದವರು ಸೈಲೆಂಟ್ ಆಗಿದ್ದಾರೆ ಎನಿಸುವುದಕ್ಕೆ ಶುರುವಾಗಿದೆ. ಯತ್ನಾಳ್ ಬಣದಲ್ಲಿ ಹಲವರಿದ್ದರು. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯಬೇಕು ಎಂದೇ ಬಯಸಿದ್ದರು. ಈಗ ಯತ್ನಾಳ್ ತಣ್ಣಗಾಗಿದ್ದು, ಉಳಿದವರು ಏನು ಮಾಡ್ತಾರೆ ಎಂಬುದನ್ನು ನೋಡಬೇಕಿದೆ.

ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಮುಂದೆ ಸ್ಪಷ್ಟನೆ ನೀಡಿದ ಬಳಿಕ ಮಾತನಾಡಿದ ಯತ್ನಾಳ್, ‘1 ಗಂಟೆ 15 ನಿಮಿಷಗಳ ಕಾಲ ಎಲ್ಲವನ್ನು ಸವಿಸ್ತಾರವಾಗಿ ಹೇಳಿದ್ದೇನೆ.ನಾನು ಹೇಳಿರುವ ಎಲ್ಲವನ್ನು ಸ್ವೀಕಾರ ಮಾಡಿದ್ದಾರೆ. ಪಕ್ಷದ ಹಿತ ದೃಷ್ಟಿಯಿಂದ ಎಲ್ಲಾ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ವಕ್ಫ್ ಬೋರ್ಡ್ ವಿರುದ್ಧದ ಹೋರಾಟಕ್ಕೆ ಪ್ರಶಂಸೆ ವ್ಯಕ್ಯಪಡಿಸಿದ್ದು, ಪಕ್ಷದ ಸಂಘಟನೆಯಿಂದ ಕೆಲಸ ಮಾಡಿ ಎಂದು ಹೇಳಿದ್ದಾರೆ. ನಿಮ್ಮ ಭಾವನೆಗಳನ್ನು ನಾಯಕರ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ. ಯಡಿಯೂರಪ್ಪ ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ನಿಮಗೆ ಭವಿಷ್ಯವನ್ನು, ಶಾಂತ ಸ್ವಭಾವದಿಂದ ಇರಿ ಎಂದು ಹೇಳಿದ್ದಾರೆ ಎಂದಿದ್ದಾರೆ.

ಇಂದು ಬೆಳಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ್ದ ಯಡಿಯೂರಪ್ಪ ಅವರು, ಯತ್ನಾಳ್ ಹೊರಗಿನವರಲ್ಲ, ನಮ್ಮವರೆ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈಕಮಾಂಡ್ ಕೂತು ಬಗೆಹರಿಸುತ್ತದೆ ಎಂದು ಹೇಳಿದ್ದರು. ಈಗ ಯತ್ನಾಳ್ ಅವರು ಕೂಡ ಶಿಸ್ತು ಸಮಿತಿಯ ಸಭೆ ಆದ ಮೇಲೆ ತಣ್ಣಗಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...