ಬೆಳಗಾವಿ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆಗೊಂಡಿದ್ದಾರೆ. ಅದಕ್ಕೆ ಕಾರಣ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮಾತಿನ ದಾಟಿ. ವಿಜಯೇಂದ್ರ ಅವರನ್ನು ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಆದರೆ ಇದಕ್ಕೆ ಯತ್ನಾಳ್ ಅವರ ವಿರೋಧವಿದೆ. ಹೀಗಾಗಿಯೇ ಕಂಡಕಂಡಲ್ಲಿ ಯಡಿಯೂರಪ್ಪ ಅವರ ಫ್ಯಾಮಿಲಿ ಬಗ್ಗೆ ನಾಲಿಗೆ ಹರಿಬಿಡುತ್ತಿದ್ದರು. ಆ ಕಾರಣಕ್ಕಾಗಿಯೇ ಉಚ್ಛಾಟಿತರು ಆದರು. ಇದೀಗ ವಾಪಾಸ್ ಆಗುವುದಕ್ಕೆ ಷರತ್ತುಗಳನ್ನ ಇಟ್ಟಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಯತ್ನಾಳ್ ಅವರು, ಬಿಜೆಪಿಯ ಮೂರ್ನಾಲ್ಕು ಶಾಸಕರೇ ಪಕ್ಷಕ್ಕೆ ವಾಪಸ್ ಬನ್ನಿ ಎಂದು ಕರೆದಿದ್ದಾರೆ. ಅಶೋಕ್ ಕಚೇರಿಯಲ್ಲಿ ಶಾಸಕರು ಚರ್ಚೆ ಮಾಡಿದ್ದು, ಪಕ್ಷಕ್ಕೆ ವಾಪಾಸಾಗಿ ಎಂದು ಹೇಳಿದ್ದಾರೆ. ಪಕ್ಷದಲ್ಲಿ ಉತ್ಸಾಹ ಇಲ್ಲ, ಹೋರಾಟಕ್ಕೆ ಜನರೂ ಸೇರುತ್ತಿಲ್ಲ. ನೀವೂ ಹೋದಲೆಲ್ಲಾ ಸಾವಿರಾರು ಜನ ಸೇರುತ್ತಾರೆ. ಜನಪ್ರಿಯತೆ ಹೆಚ್ಚಾಗಿರುವುದರಿಂದ ಮತ್ತೆ ಬಿಜೆಪಿಗೆ ಬನ್ನಿ ಎಂದು ಬಿಜೆಪಿ ನಾಯಕರು ಕರೆಯುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹಾಗೇ ಸುಮ್ಮನೆ ಶಾಸಕನಾಗಿ ಬಿಜೆಪಿಗೆ ವಾಪಾಸ್ ಹೋಗುವುದಿಲ್ಲ. ಏನಾದರೂ ಮಾತುಕೊಟ್ಟರೆ ಮಾತ್ರ ಪಕ್ಷಕ್ಕೆ ಬರುತ್ತೇನೆಂದು ಹೇಳಿದ್ದೇನೆ ಎಂದಿದ್ದಾರೆ.
ಈಗ ರಾಜ್ಯ ಬಿಜೆಪಿ ಅಧ್ಯಕ್ಷ ಅಥವಾ ವಿಪಕ್ಷ ನಾಯಕನ ಸ್ಥಾನ ನೀಡಬೇಕು. ಮುಂದೆ ಸಿಎಂ ಸ್ಥಾನ ಕೊಡಬೇಕು ಎಂದು ಹೇಳಿದ್ದೇನೆ. ಅಮಿತ್ ಶಾ ಭೇಟಿ ಮಾಡಿಸುತ್ತೇವೆ ಅಂತ ನನಗೆ ಯಾರೂ ಹೇಳಿಲ್ಲ. ಒಂದು ವೇಳೆ ಅವರಾಗಿ ಕರೆದು ಎಲ್ಲದಕ್ಕೂ ಒಪ್ಪಿಕೊಂಡಿದ್ದೇವೆ ಅಂದ್ರೆ ಹೋಗುತ್ತೇನೆ. ಆ ಅವಕಾಶ ಸಿಕ್ಕಿದರೆ ಮುಂದಿನ ಸೀಟ್ನಲ್ಲಿ ಕೂರಿವುದು, ಇಲ್ಲವಾದರೆ ಜೆಸಿಬಿ ಪಕ್ಷ ಮಾಡುವುದು ಎಂಬುದನ್ನ ಸ್ಪಷ್ಟ ಪಡಿಸಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






