Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಮಾಜ್ ಅನುಮತಿ ನಿರಾಕರಿಸುವಂತೆ ಸಿಎಂಗೆ ಮನವಿ ಮಾಡಿದ ಯತ್ನಾಳ್..!

---Advertisement---

ಬೆಂಗಳೂರು: ಇತ್ತೀಚೆಗಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಕಾರ್ಯಕ್ರಮಗಳನ್ನು ನಿಷೇಧಿಸುವಂತೆ ಪತ್ರ ಬರೆದಿದ್ದರು. ಕ್ಯಾಬಿನೆಟ್ ಸಭೆಯಲ್ಲಿ ಅದಕ್ಕೆ ಮಾನ್ಯತೆಯೂ ಸಿಕ್ಕಂತಾಗಿದೆ. ಇದೀಗ ಶಾಸಕ ಯತ್ನಾಳ್ ಗರಂ ಆಗಿದ್ದು, ನಮಾಜ್ ಮಾಡುವುದಕ್ಕೂ ಅನುಮತಿ ನಿರಾಕರಿಸುವಂತೆ ಪತ್ರದಲ್ಲಿ ಬರದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಕಳುಹಿಸಿದ್ದಾರೆ.

ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ. ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರದ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್ ಗೆ ವಿಶೇಷ ಅನುಮತಿ ನೀಡಬಾರದು.

ಇತರ ಸಂಸ್ಥೆಗಳ ಕಾರ್ಯ ಚಟುವಟಿಕೆ ನಿರ್ಬಂಧಿಸಿ ಇಂತಹ ಧಾರ್ಮಿಜ ಚಟುವಟಿಕೆಗಳಿಗೆ ಅವಕಾಶ ನೀಡುವುದು ಆಡಳಿತದ ಮೇಲಿನ ನಂಬಿಕೆಗೆ ಚ್ಯುತಿ ತರಬಹುದಾದ ಕಟರಣ ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಆದೇಶಿಸಬೇಕು. ಅನುಮತಿ ಇಲ್ಲದೆ ರಸ್ತೆಗಳು ಪಾದಚಾರಿ ಮಾರ್ಗಗಳು ಅಥವಾ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶ ನೀಡದಂತೆ ಸೂಚನೆ ನೀಡಬೇಕು. ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳುಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOP ಯನ್ನು ಸರ್ಕಾರ ರೂಪಿಸಬೇಕು ಎಂದು ಯತ್ನಾಳ್ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now