ಗೃಹಲಕ್ಷ್ಮೀ ಯೋಜನೆಗೆ ವರ್ಷ: ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ : ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

1 Min Read

 

 

ಚಿತ್ರದುರ್ಗ, ಸೆಪ್ಟೆಂಬರ್. 02 : ಗೃಹಲಕ್ಷ್ಮೀ ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಹಿಸಿದೆ.ಇದು ಎಷ್ಟೋ ಮಹಿಳೆಯರಿಗೆ ಜೀವನ ನಡೆಸಲು ಸಾಕಷ್ಟು ಸಹಾಯವಾಗಿದೆ. ಈ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಮಹಿಳೆಯರಿಗೆ ಸಂತಸದ ವಿಚಾರ ತಿಳಿಸಿದ್ದಾರೆ.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣೆ ಪ್ರಣಾಳಿಕೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ವಾಗ್ದಾನ ನೀಡಿದಾಗ ವಿರೋಧ ಪಕ್ಷಗಳು ಇದು ಕೇವಲ ಚುನಾವಣೆ ಗಿಮಿಕ್ ಎಂದಿದ್ದವು. ಆದರೆ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಯೋಜನೆ ಜಾರಿ ಮಾಡಿ ರಾಜ್ಯದ ಅರ್ಹ ಮಹಿಳೆಯರ ಖಾತೆಗೆ ಪ್ರತಿ ಮಾಹೆ ರೂ.2000 ಜಮೆ ಮಾಡಲಾಗುತ್ತಿದೆ. ಇದುವರೆಗೂ ಜೂನ್ ಮಾಹೆಯವರೆಗಿನ ಗೃಹಲಕ್ಷ್ಮೀ ಹಣವನ್ನು ಜಮೆ ಮಾಡಲಾಗಿದೆ. ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು 5 ರಿಂದ 10 ದಿನದೊಳಗೆ ಜಮೆ ಮಾಡುವುದಾಗಿ ಹೇಳಿದರು.

ಗೃಹಲಕ್ಷ್ಮೀ ಯೋಜನೆಯಡಿ ಇದುವರೆಗೂ ರೂ.26,260 ಕೋಟಿ ಹಣ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣ, ದೇಶದ ಸಣ್ಣ ಪುಟ್ಟ ರಾಜ್ಯಗಳ ವಾರ್ಷಿಕ ಆಯವ್ಯಯಕ್ಕೆ ಸಮನಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಯೋಜನೆ ಲಾಭ ಪಡೆದ ಮಹಿಳೆಯರು ಸಾಮಾಜಿಕ ಮಾಧ್ಯಮಗಳಲ್ಲಿ ರೀಲ್ಸ್ ಮೂಲಕ ಹಿಮ್ಮಾಯಿತಿ ನೀಡಬಹುದು.

ಫೇಸ್‍ಬುಕ್, ಯುಟ್ಯೂಬ್, ಇನ್ಸ್ಟಾಗ್ರಾಂ ಮೂಲಕ ಅಭಿಪ್ರಾಯವನ್ನು ರೀಲ್ಸ್ ವಿಡಿಯೋ ಮೂಲಕ ವ್ಯಕ್ತಪಡಿಸಲು ಕೋರಿದ್ದು, ಅತ್ಯುತ್ತಮ ವಿಡಿಯೋ ರೀಲ್ಸ್ ಗೆ ಬಹುಮಾನ ನೀಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *