ಬೆಂಗಳೂರು; ಬಿಜೆಪಿ ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 82ನೇ ವರ್ಷದ ಹುಟ್ಟುಹಬ್ಬ. ಇಂದು ಅವರ ಕುಟುಂಬದವರೆಲ್ಲ ಸೇರಿ, ಯಡಿಯೂರಪ್ಪ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಯಡಿಯೂರಪ್ಪ ನಿವಾಸ ದವಳಗಿರಿಗೆ ಇಂದು ಹೂಗಳಿಂದ ಅಲಂಕಾರಗೊಂಡಿದೆ. ಮನೆಯಲ್ಲಿ 82ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಮನೆಯಲ್ಲಿ ಯಡಿಯೂರಪ್ಪ ಅವರ ಮಕ್ಕಳು, ಸೊಸೆಯಂದಿರು, ಅಳಿಯಂದಿರೆಲ್ಲ ಬರ್ತ್ ಡೇ ಆಚರಿಸಿದ್ದು, ಬಳಿಕ ಮನೆ ದೇವರ ದರ್ಶನ ಪಡೆಯಲು ಹೋಗಿದ್ದಾರೆ.

ಮನೆ ದೇವರ ಜೊತೆಗೆ ಯಡಿಯೂರು ಶ್ರೀಸಿದ್ದಲಿಂಗೇಶ್ವರನಿಗೆ ಭೇಟಿ ನೀಡಿ, ವಿಶೇಷ ಪೂಜೆ ಮಾಡಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಯವರೆಗೂ ತಮ್ಮ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಇರಲಿದ್ದು, ಬಳಿಕ ದೇವಸ್ಥಾನಗಳಿಗೆ ತೆರಳಲಿದ್ದಾರೆ. ಈ ಸಮಯದಲ್ಲಿ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಶುಭಾಶಯಗಳನ್ನು ತಿಳಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಅವರ ಕಾರ್ಯಕರ್ತರು, ಅಭಿಮಾನಿಗಳೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಶುಭಾಶಯ ತಿಳಿಸುತ್ತಿದ್ದಾರೆ. ಹಲವರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ.

ಬಿಜೆಪಿ ಸಂಸದ ಬಿವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಕುಟುಂಬ ಸಮೇತ ಡಾಲರ್ಸ್ ಕಾಲೋನಿ ಮನೆಗೆ ಬಂದಿದ್ದು, ವಿಶೇಷವಾಗಿ ಶುಭಾಶಯ ಕೋರಿದ್ದಾರೆ. ಇನ್ನು ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭ ಕೋರುವ ಬ್ಯಾನರ್, ಫ್ಲೆಕ್ಸ್ಗಳ ಅಳವಡಿಕೆ ಜೋರಾಗಿದೆ. ಇನ್ನು ಪಕ್ಷದ ಮುಖಂಡರು, ಆಪ್ತರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿವಾಸಕ್ಕೆ ಆಗಮಿಸಿ ಶುಭಶಯಗಳನ್ನು ತಿಳಿಸುತ್ತಿದ್ದಾರೆ. ಯಡಿಯೂರಪ್ಪ ಅವರಿಗೆ ಈಗ 82 ವರ್ಷ ವಯಸ್ಸು. ಇನ್ನಷ್ಟು ಆರೋಗ್ಯ, ಆಯಸ್ಸು ಕೊಟ್ಟು ದೇವರು ಕಾಪಾಡಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

