Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧರ್ಮಸ್ಥಳ, ಕುಕ್ಕೆಗೆ ಯಡಿಯೂರಪ್ಪ ಭೇಟಿ : ದಿಢೀರ್ ಟೆಂಪಲ್ ರನ್ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು..?

---Advertisement---

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ದಿಢೀರನೇ ಟೆಂಪಲ್ ರನ್ ಶುರು ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆ ಮುಗಿದು, ಬಿಜೆಪಿಯೇ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಯಡಿಯೂರಪ್ಪ ಅವರು ದೇವಸ್ಥಾನಗಳನ್ನು ಸುತ್ತುತ್ತಾ ಉದ್ದಾರೆ. ಇಂದು ಬೆಳಗ್ಗೆಯೇ ಧರ್ಮಸ್ಥಳದ ಶ್ರೀಮಂಜುನಾಥನ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಮಾಡಿಸಿದ್ದಾರೆ.

ಈ ವೇಳೆ ಮಾತನಾಡಿದ ಯಡಿಯೂರಪ್ಪ ಅವರು, ಬಹಳ ವರ್ಷಗಳ ಬಳಿಕ ಮಂಜುನಾಥನ ದರ್ಶನ ಪಡೆದಿದ್ದೇನೆ. ಹೆಗ್ಡೆಯವರ ಆಶೀರ್ವಾದವನ್ನು ಪಡೆದಿದ್ದೇನೆ. ನಮ್ಮ ಭಾಗದಲ್ಲಿ ಒಂದು ರೀತಿಯ ಬರಗಾಲವಿದ್ದು, ಉತ್ತಮ ಮಳೆ-ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಮುಂಬರುವ ದಿನಗಳು ಒಳ್ಳೆಯ ದಿನಗಳಾಗಿರುತ್ತವೆ ಎಂದಿದ್ದಾರೆ. ಯಡಿಯೂರಪ್ಪ ಅವರ ಜೊತೆಗೆ ಶಾಸಜ ಹರೀಶ್ ಪೂಂಜಾ, ಶ್ರೀನಿವಾಸ್ ರಾವ್, ಜಯಂತ್ ಕೋಟ್ಯಾನ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದು, ಬಳಿಕ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿದ ಬಳಿಕ ಯಡಿಯೂರಪ್ಪ ಅವರು ಕುಕ್ಕೆಗೆ ಪಯಣ ಬೆಳೆಸಿದ್ದಾರೆ. ಅಲ್ಲಿ ನಾಣ್ಯಗಳ ತುಲಭಾರ ಸೇವೆಯನ್ನು ಸಲ್ಲಿಸಿದರು. ದೇವಾಲಯದ ಅರ್ಚಕರು ಈ ಸೇವೆಯನ್ನು ನೆರವೇರಿಸಿಕೊಟ್ಟರು. ಅಲ್ಲಿಯೂ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಮತ್ತು ದೇವಸ್ಥಾನದ ಸಮಿತಿಯವರು ಇದ್ದರು. ಮಧ್ಯಾಹ್ನ ಯಡಿಯೂರಪ್ಪನವರು ಸುಳ್ಯದ ಬಿಜೆಪಿ ಕಛೇರಿ ಉದ್ಘಾಟಿಸಲಿದ್ದಾರೆ. ಚುನಾವಣೆ ಮುಗಿದ ಬಳಿಕ ಯಡಿಯೂರಪ್ಪ ಅವರು ರಾಜ್ಯದ ದೇವಸ್ಥಾನಗಳತ್ತ ನಡೆಯುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ವೈದ್ಯರ ದಿನದ ವಿಶೇಷ : ಮಳೆಗಾಲದಲ್ಲಿ ಆರೋಗ್ಯದ ಮೇಲೆ ನಿಗಾ ಇರಲಿ: ಸೋಂಕುಗಳಿಂದ ಬಚಾವಾಗಲು ಈ ಆಹಾರ ಕ್ರಮ ಪಾಲಿಸಿ

ವೈದ್ಯೋ ನಾರಾಯಣ ಹರಿ: ದೇವರ ರೂಪದ ವೈದ್ಯರಿಗೆ ನಮನ; ಜುಲೈ 1 ರಂದು ‘ರಾಷ್ಟ್ರೀಯ ವೈದ್ಯರ ದಿನ’ದ ಹಿನ್ನೆಲೆ ಮತ್ತು ಮಹತ್ವ!

National Doctors’ Day : ಜೀವ ಉಳಿಸುವ ವೈದ್ಯರಿಗೆ ಕೃತಜ್ಞತೆ ಸಲ್ಲಿಸುವ ದಿನ; ಇತಿಹಾಸ, ಮಹತ್ವ ಮತ್ತು ಡಾ. ಬಿ.ಸಿ. ರಾಯ್ ಅವರ ಸಾಧನೆ ಇಲ್ಲಿದೆ

ಭಾರತದಲ್ಲಿ `ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನ’ : ಜುಲೈ 1 ರಂದೇ ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಇದರ ಇತಿಹಾಸ, ಮಹತ್ವ ಮತ್ತು ಥೀಮ್

ದಂತ ವೈದ್ಯನ ‘ಗ್ರಾಮ ದರ್ಶನ’ ಯಾನ: ಹಳ್ಳಿಗಳ ಇತಿಹಾಸ ಅರಸಿ ಹೊರಟ ಅಪರೂಪದ ಸಂಶೋಧಕ!

ಚಾಣಕ್ಯ ನೀತಿ: ಅತಿಯಾದ ಮುಗ್ಧತೆ ಬಿಟ್ಟು ಚಾಣಾಕ್ಷರಾಗಿ! ಸ್ವಾರ್ಥಿ ಜಗತ್ತಿನಲ್ಲಿ ಗೆಲ್ಲಲು ಚಾಣಕ್ಯರ ಈ ಸೂತ್ರಗಳನ್ನು ಪಾಲಿಸಿ

Leave a Comment