Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯ ರಾಜಕಾರಣದಲ್ಲಿ 50 ವರ್ಷ ಪೂರೈಸಿದ ಯಡಿಯೂರಪ್ಪ : ಚಿತ್ರದುರ್ಗದಲ್ಲಿ ಸಮಾವೇಶಕ್ಕೆ ಪ್ಲ್ಯಾನ್

---Advertisement---

ಬೆಂಗಳೂರು: ಯಡಿಯೂರಪ್ಪ ಅವರ ಹೆಸರು ಹೇಳಿದರೆ ಈಗಲೂ ಅವರ ಹೋರಾಟಗಳು ಕಣ್ಣ ಮುಂದೆ ಬರುತ್ತೆ, ರೈತರ ಪರವಾಗಿ ಅವರು ನಿಂತ ರೀತಿ, ಪಕ್ಷ ಬಲವರ್ಧನೆ ಮಾಡಲು ಪಟ್ಟ ಶ್ರಮ ಎಲ್ಲವೂ ನೆನಪಿಗೆ ಬರುತ್ತದೆ. ಇದೀಗ ರಾಜ್ಯ ರಾಜಕಾರಣದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು 50 ವರ್ಷಗಳನ್ನ ಪೂರೈಸಿದ್ದಾರೆ. ಈ ಹಿನ್ನೆಲೆ ಯಡಿಯೂರಪ್ಪ ಅವರಿಗೆ ಸನ್ಮಾನ ಮಾಡಲು ಬಿಜೆಪಿ ಚಿಂತನೆ ನಡೆಸಿದೆ. ಅದಕ್ಕಾಗಿ ಬೃಹತ್ ಸಮಾವೇಶ ನಡೆಸಲು ಸಜ್ಜಾಗಿದೆ. ಚಿತ್ರದುರ್ಗದಲ್ಲಿ ಈ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗ್ತಿದೆ.

ಸಾಮಾನ್ಯ ಕಾರ್ಯಕರ್ತರಾಗಿ ಬಂದು ಮುಖ್ಯಮಂತ್ರಿಯೂ ಆಗಿದ್ದಾರೆ. ಹೀಗಾಗಿ ಮೇ ಮೊದಲ ವಾರದಲ್ಲಿಯೇ ಬೃಹತ್ ಸಮಾವೇಶ ನಡೆಸಿ, ಅಲ್ಲಿಂದ ಚುನಾವಣೆಗೂ ರಣಕಹಳೆ ಊದಲು ಸಿದ್ಧರಾಗ್ತಿದ್ದಾರೆ. 2028ರ ವಿಧಾನಸಭಾ ಚುನಾವಣೆಗೆ ಅಂದ್ರೆ ಎರಡು ವರ್ಷಗಳಲ್ಲಿ ಎದುರಾಗಲಿರುವ ಚುನಾವಣೆಗೆ ಬಿಜೆಪಿ ಪ್ಲ್ಯಾನ್ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿಯಾದ ಮೋಹನ್ ದಾಸ್, ವಿರೋಧ ಒಕ್ಷದ ನಾಯಕ ಆರ್.ಅಶೋಕ್, ಚಿತ್ರದುರ್ಗ ಸಂಸದ, ಕೋರ್ ಕಮಿಟಿ ಸದಸ್ಯರಾಗಿರುವ ಗೋವಿಂದ ಕಾರಜೋಳ ಸೇರಿದಂತೆ ಹಲವರು ಕೋರ್ ಕಮಿಟಿ ಸಭೆಯಲ್ಲಿ ಉಪಸ್ಥಿತರಿದ್ದರು.

ಈ ಕೋರ್ ಕಮಿಟಿ ಸಭೆಯಲ್ಲಿ, ಬಿಎಸ್ ಯಡಿಯೂರಪ್ಪ ಅವರ ಸಾರ್ಥಕ 50 ವರ್ಷಗಳ ರಾಜಕಾರಣ ಇದನ್ನ ಇಟ್ಟುಕೊಂಡು ಒಂದು ಕಾರ್ಯಕ್ರಮ ಮಾಡಬೇಕು ಅಂತ ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬವನ್ನ ಕಾಂಗ್ರೆಸ್ ನಾಯಕರು ಸಿದ್ದರಾಮೋತ್ಸವ ಎಂಬ ಹೆಸರಿನಲ್ಲಿ ದಾವಣಗೆರೆಯಲ್ಲಿ ಮಾಡಿತ್ತು. ಇದೀಗ ಬಿಜೆಪಿ ಅದೇ ರೀತಿ ಚುತ್ರದುರ್ಗದಲ್ಲಿ ಮಾಡುವುದಕ್ಕೆ ರೆಡಿಯಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...