Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದಾವಣಗೆರೆ, ಚಿತ್ರದುರ್ಗಕ್ಕೆ ಯೆಲ್ಲೋ ಅಲರ್ಟ್ : ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ..!

---Advertisement---

ಬೆಂಗಳೂರು: ರಾಜ್ಯದೆಲ್ಲೆಡೆ ಮುಂದಿನ ಎರಡು ದಿನಗಳಲ್ಲಿ ರಾಜ್ಯಾದ್ಯಂತ ಜೋರು ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಜೋರು ಮಳೆಯಾಗಲಿದೆ. ಅದರಲ್ಲೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದ್ದು, ಈ ಭಾಗಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗೇ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಧಾರವಾಡ, ಬೀದರ್, ಬೆಳಗಾವಿ, ರಾಯಚೂರು, ಕಲಬುರಗಿ, ಹಾವೇರಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೇ ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಮೈಸೂರು, ಮಂಡ್ಯ, ಚಾಮರಾಜನಗರ, ಧಾರವಾಡ, ಬೀದರ್, ಬೆಳಗಾವಿ, ರಾಯಚೂರು, ಕಲಬುರಗಿ, ಹಾವೇರಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ನಿನ್ನೆ ಬಾರಿ ಮಳೆಯಾಗಿದ್ದು, ಇಂದು ಸಹ ಮೋಡಕವಿದ ವಾತಾವರಣವಿದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಇಂದು ಕೂಡ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್​ಎಎಲ್​ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment