ಬೆಂಗಳೂರು; ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಇಂದು ಕೂಡ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಇನ್ನು ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಹಾಗೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ವಿಜಯಪುರ, ಗದಗ, ಯಾದಗಿರಿ, ಕಲಬುರಗಿ, ಚಾಮರಾಜನಗರ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಷಾಢಮಾಸ ಬೇರೆ ಶುರುವಾಗುತ್ತಿರುವ ಕಾರಣ ಜೋರು ಗಾಳಿಯೂ ಬೀಸುತ್ತಿದೆ. ಮಳೆಯ ಜೊತೆಗೆ ಗಾಳಿಯೂ ಇದೆ.

ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕಳೆದ ಎರಡು ದಿನದಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಚಳಿಯೂ ಜಾಸ್ತಿಯಾಗಿದೆ. ಗಾಳಿ, ಚಳಿಯೊಂದಿಗೆ ಬೆಳಗ್ಗಿನ ಕೆಲಸಗಳನ್ನ ಶುರು ಮಾಡುವುದೇ ಜನರಿಗೆ ಸಂಕಷ್ಟವಾದಂತೆ ಆಗಿದೆ. ಮಳೆಯ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದ್ದು, ಕೃಷಿ ಕೆಲಸಗಳಿಗೆ ರೈತರು ಹೊರಟರೆ, ಚಳಿ ಚಳಿ ಫೀಲ್ ನಲ್ಲಿಯೇ ಜನ ತಮ್ಮ ತಮ್ಮ ಕೆಲಸಗಳನ್ನ ಶುರು ಮಾಡಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ. ಮಳೆಯಲ್ಲಿ ಮಕ್ಕಳು ಮನೆಯಿಂದ ಬರುವುದಕ್ಕೆ ಸಾಧ್ಯವಾಗದ ಕಾರಣ ರಜೆ ನೀಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















