ಬೆಂಗಳೂರು: ಚಿನ್ನದ ದರ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ನಿನ್ನೆಯಷ್ಟೇ 35 ರೂಪಾಯಿ ಏರಿಕೆಯಾಗಿತ್ತು. ಇಂದು ನೋಡಿದ್ರೆ 87 ರೂಪಾಯಿ ಅಷ್ಟು ಏರಿಕೆಯಾಗಿ, ಚಿನ್ನಾಭರಣ ಪ್ರಿಯರಿಗೆ ಶಾಕಿಂಗ್ ನೀಡಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,980 ರೂಪಾಯಿ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನ 8,800 ರೂಪಾಯಿ ಇದೆ. 22 ಕ್ಯಾರಟ್ ಹತ್ತು ಗ್ರಾಂಗೆ 80,600 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 87,930 ರೂಪಾಯಿ ಆಗಿದೆ.
ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 80,600 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 80,750 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 76,960 ರೂಪಾಯಿ ಇದೆ. ಅಮೆರಿಕಾದಲ್ಲಿ 67,810 ಇದೆ. ಸೌದಿಯಲ್ಲಿ 76,740 ಇದೆ.
ಇನ್ನು ಬೆಳ್ಳಿ ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. 10 ಪೈಸೆಯಷ್ಟು ಕಡಿಮೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 99.40 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,940 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,940 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,690 ರೂಪಾಯಿ ಇದೆ. .
ಸುದ್ದಿಒನ್ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ AI ಕ್ರಿಯಾ ಶೃಂಗಸಭೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ…
ಗುಬ್ಬಿ: ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಎಡಗಾಲಿನ ಮಂಡಿನೋವು ಕಾಣಿಸಿಕೊಂಡ ಕಾರಣ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಒಂದೆರಡು…
ಚಿತ್ರದುರ್ಗ. ಫೆ.11: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಮೂಡಿಸುವ ಎಲ್‍ಇಡಿ ವಾಹನಕ್ಕೆ ಜಿಲ್ಲಾ ಗ್ಯಾರಂಟಿ…
ಚಿತ್ರದುರ್ಗ. ಫೆ.11: ದೇಶದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾದಂತೆ ಅಂತರ್ಜಾಲದಲ್ಲಿ ವಂಚನೆ ಮಾಡುವವರು ಕೂಡ ಹೆಚ್ಚಾಗುತ್ತಿದ್ದು, ಹೀಗಾಗಿ ಎಚ್ಚರ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…