Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎತ್ತಿನಹೊಳೆ ಯೋಜನೆ ; ಕೇಂದ್ರದ ಅನುಮತಿಗೆ ದೆಹಲಿಗೆ ಪ್ಲ್ಯಾನ್ ಮಾಡಿದ ಡಿಕೆಶಿ

ಡಿಕೆ ಶಿವಕುಮಾರ್
---Advertisement---

ಬೆಂಗಳೂರು; ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಅರಣ್ಯ ಹಾಗೂ ನೀರಾವರಿ ಇಲಾಖೆಯ ಜೊತೆಗೆ ಸಭೆ ನಡೆದಿದೆ. ಈ ಸಭೆಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾರ್ಚ್ 18ರಂದು ದೆಹಲಿಗೆ ತೆರಳುತ್ತಿದ್ದೇನೆ. ಅರಣ್ಯ ಇಲಾಖೆಗೆ ಅನುಮತಿ ಕೇಳಲು ಹೋಗುತ್ತೇನೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ಅನುಮತಿ ದೊರೆಯದ ಕಾರಣ ಎತ್ತಿನಹೊಳೆ ಯೋಜನೆಯನ್ನು ಮುಂದುವತೆಸಲು ಕಷ್ಟ. 508 ಎಕರೆ 1 ಗುಂಟೆ ಅರಣ್ಯ ಭೂಮಿಯನ್ನ ಬಳಸಿಕೊಳ್ಳಲು ಭೇಟಿ ಮಾಡಿ ಚರ್ಚೆ ನಡೆಸಲಾಗುವುದು. ಎತ್ತಿನಹೊಳೆ ಯೋಜನೆಗೆ ಬಳಸಲಾಗುವ ಭೂಮಿಗೆ ಬದಲಿಯಾಗಿ ಬೇರೆ ಕಡೆ ಜಮೀನನ್ನ ನೀಡಲಾಗುವುದು. ಈ ಸಂಬಂಧ ಅರಣ್ಯ ಇಲಾಖೆ ಸ್ಪಷ್ಟನೆ ಕೇಳಿದ ಕಾರಣಕ್ಕೆ ಅರಣ್ಯ ಸಚಿವರಾದ ಈಶ್ಚರ್ ಖಂಡ್ರೆ ಹಾಗೂ ನಾನು ಅಧಿಕಾರಿಗಳ ಸಭೆ ನಡೆಸಿದೆವು. ತುಮಕೂರು ಹಾಗೂ ಹಾಸನ ಜಿಲ್ಲಾಧಿಕಾರಿಗಳು ಎಲ್ಲೆಲ್ಲಿ ಸರ್ಕಾರ ಜಮೀನುಗಳನ್ನ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಬಹುದೋ ಆ ಕೆಲಸವನ್ನ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುನಾರ್ ತಿಳಿಸಿದ್ದಾರೆ.

ಎಲ್ಲಾ ಅಡೆತಡೆಗಳನ್ನು ತಡೆದು ತುಮಕೂರು ಹಾಗೂ ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗುವುದು. ಕೆಲಸ‌ನಿಂತು ಹೋಗಿರುವ ಕಾರಣ ಸಭೆ ನಡೆಸಲಾಗಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಒಂದು ಲಕ್ಷ ಕೋಟಿಯಷ್ಟು ಅಭಿವೃದ್ಧಿ ಕಾಮಗಾರಿಗಳನ್ನ ಕೈಗೆತ್ತಿಕೊಳ್ಳಾಗಿದೆ. ನಾಲ್ಕು ಲಕ್ಷ‌ ಕೋಟಿಗೂ ಮೀರಿದ ಬಜೆಟ್ ನಲ್ಲಿ ನೀರಾವರಿ, ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದಿದ್ದಾರೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ದೆಹಲುಗೆ ಭೇಟಿ ನೀಡಿದ ಬಳಿಕ ತೀರ್ಮಾನವಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment